ನವದೆಹಲಿ: ವಿಶ್ವಕಪ್ 2023ರ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಬರೆದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli) ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಹಾಡಿ ಹೊಗಳಿದ್ದಾರೆ.
ವಿರಾಟ್ ಕೊಹ್ಲಿ ಹೊಂದಿರುವ ಸಮರ್ಪಣೆ ಮತ್ತು ಉತ್ಸಾಹವು ಅಜೇಯವಾಗಿದೆ. ಸಮರ್ಪಣೆ ಮತ್ತು ಕಠಿಣ ಪರಿಶ್ರಮವಿಲ್ಲದೆ ಈ ಸ್ಥಾನವನ್ನು ತಲುಪಲು ಸಾಧ್ಯವಿಲ್ಲ. ವಿಶೇಷವಾಗಿ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ದಾಖಲೆಯನ್ನು ಮುರಿಯಲು ಅಸಾಧ್ಯವೆಂದು ಪರಿಗಣಿಸಲಾಗಿತ್ತು ಎಂದು ಸಲ್ಮಾನ್ ಹೇಳಿದ್ದಾರೆ. ಇದನ್ನೂ ಓದಿ: World Cup Final: ಆಸೀಸ್‌ಗೆ 241 ರನ್‌ಗಳ ಗುರಿ – ವಿಶ್ವಕಪ್‌ಗಾಗಿ ಶತಕೋಟಿ ಭಾರತೀಯರ ಪ್ರಾರ್ಥನೆ
Advertisement
Advertisement
ಕೊಹ್ಲಿ ಅವರು ಈ ಸ್ಥಾನವನ್ನು ತಲುಪಲು ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಇದು ನಿಜವಾಗಿಯೂ ಶ್ಲಾಘನೀಯ ಎಂದು ಖಾನ್ ಬಣ್ಣಿಸಿದ್ದಾರೆ.
Advertisement
ತಂಡದ ಕುರಿತು ಮಾತನಾಡಿದ ಬಾಲಿವುಡ್ ನಟ, ವಿಶ್ವಕಪ್ ಟ್ರೋಫಿಗೆ ಭಾರತ ತಂಡ 100 ಪ್ರತಿಶತ ಅರ್ಹ. ಈ ಟ್ರೋಫಿ ಭಾರತದಲ್ಲಿ ಮಾತ್ರ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ನನ್ನ ಅಭಿಪ್ರಾಯ. ಭಾರತ ತಂಡ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದು, ಫೈನಲ್ ಪಂದ್ಯವನ್ನು ಕಳೆದುಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಫೈನಲ್ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್ ಬೆಂಬಲಿಗ ಅರೆಸ್ಟ್
Advertisement
ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ (49) ಬಾರಿಸಿದ ದಾಖಲೆ ಸಚಿನ್ ಅವರದ್ದಾಗಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಕೊಹ್ಲಿ, ಸಚಿನ್ ದಾಖಲೆಯನ್ನು ಮುರಿದಿದ್ದಾರೆ.
ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣಸುತ್ತಿವೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿದೆ. ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಗಳಿಸಿದೆ. ಆ ಮೂಲಕ ಆಸ್ಟ್ರೇಲಿಯಾಗೆ 241 ರನ್‌ಗಳ ಗುರಿ ನೀಡಿದೆ.