ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭಗೊಂಡ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ (IND vs ENG 1st Test) ಮೊದಲ ಇನ್ನಿಂಗ್ಸ್‌ನ 64.3 ಓವರ್‌ಗಳಲ್ಲಿ 246 ರನ್‍ಗಳಿಗೆ ಪ್ರವಾಸಿ ತಂಡ ಸರ್ವಪತನ ಕಂಡಿದೆ. ಈ ಮೂಲಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡಕ್ಕೆ ಟೀಂ ಇಂಡಿಯಾ ಶಾಕ್ ನೀಡಿದೆ.
Advertisement
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಪಂದ್ಯದ ಆರಂಭದಿಂದಲೇ ಭಾರತೀಯ ಬೌಲರ್‌ಗಳ ದಾಳಿಗೆ ಬೆಚ್ಚಿದ ಇಂಗ್ಲೆಂಡ್ ತಂಡ ಕೇವಲ 64.3 ಓವರ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. 246 ರನ್‍ಗೆ ಅಲೌಟ್ ಆಗಿದೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದ ಕೊಹ್ಲಿ
Advertisement
Advertisement
ಭಾರತದ ಬೌಲರ್‌ಗಳಾದ ಆರ್.ಅಶ್ವಿನ್ 21 ಓವರ್‌ಗಳಿಗೆ 68 ರನ್ ನೀಡಿ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 18 ಓವರ್‍ಗೆ 88 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ 2 ವಿಕೆಟ್ ಮತ್ತು ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಟೀಂ ಇಂಡಿಯಾದ ಸ್ಪಿನ್ನರ್‌ಗಳು ಅಬ್ಬರದ ಬೌಲಿಂಗ್ ರುಚಿಯನ್ನು ಇಂಗ್ಲೆಂಡ್‍ಗೆ ತೋರಿಸಿದ್ದಾರೆ.
Advertisement
ಇಂಗ್ಲೆಂಡ್ ಪರ ಆರಂಭಿಕ ಜೋಡಿಯಾದ ಜ್ಯಾಕ್ ಕ್ರಾಲಿ ಮತ್ತು ಬೆನ್ ಡಕೆಟ್ ಅರ್ಧಶತಕದ ಆರಂಭ ನೀಡಿದರು. ಬಳಿಕ 20 ರನ್ ಗಳಿಸಿ ಜ್ಯಾಕ್ ಕ್ರಾಲಿ ಔಟಾದರು. ಇವರ ಬೆನ್ನಲ್ಲೇ ಓಲಿ ಪೋಪ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬೆನ್ ಡಕೆಟ್ 35 ರನ್ ಗಳಿಸಿ ಪೆವೆಲಿಯನ್‍ಗೆ ಮರಳಿದರು. ಇನ್ನಿಂಗ್ಸ್‍ನ ಅಂತಿಮ ಹಂತದವರೆಗೂ ನಾಯಕ ಬೆನ್ ಸ್ಟೋಕ್ಸ್ ಏಕಾಂಗಿಯಾಗಿ ತಂಡದ ಮೊತ್ತ ಹೆಚ್ಚಿಸಲು ಪ್ರಯತ್ನಿಸಿದರು. ಈ ವೇಳೆ ಸ್ಟೋಕ್ಸ್ 88 ಎಸೆತದಲ್ಲಿ 3 ಸಿಕ್ಸ್ ಮತ್ತು 7 ಬೌಂಡರಿ ಚಚ್ಚುವ ಮೂಲಕ 70 ರನ್ ದಾಖಲಿಸಿದರು. ಉಳಿದ ಆಟಗಾರರಾದ, ಜೋ ರೂಟ್ 29 ರನ್, ಜಾನಿ ಬೈರ್‍ಸ್ಟೋವ್ 37 ರನ್, ಬೆನ್ ಫಾಕ್ಸ್ 4 ರನ್, ರೆಹಾನ್ ಅಹ್ಮದ್ 13 ರನ್, ಟಾಮ್ ಹಾಟ್ರ್ಲೀ 23 ರನ್, ಮಾರ್ಕ್ ವುಡ್ 11 ರನ್ ಗಳಿಸಿದರು.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್‍ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್?ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‍ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫಾಕ್ಸ್, ರೆಹಾನ್ ಅಹ್ಮದ್, ಟಾಮ್ ಹಾಟ್ರ್ಲೀ, ಮಾರ್ಕ್ ವುಡ್, ಜಾಕ್ ಲೀಚ್. ಇದನ್ನೂ ಓದಿ: ‘ಜೈ ಶ್ರೀರಾಮ್ ಇಂಡಿಯಾ’: ವಿಶೇಷ ಪೋಸ್ಟ್ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್ ವಾರ್ನರ್