ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್?

Public TV
1 Min Read
VIRAT KOHLI

ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತೆರಳಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

VIRAT KOHLI 2

ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವಾಡಲು ಟೀಂ ಇಂಡಿಯಾ ಕಳೆದ ವಾರ ಇಂಗ್ಲೆಂಡ್‍ಗೆ ಪ್ರಯಾಣ ಬೆಳಸಿದೆ. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಮೊದಲು ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನೂಳಿದ ಇತರ ಆಟಗಾರರು ಇಂಗ್ಲೆಂಡ್‍ಗೆ ತೆರಳಿ ಅಭ್ಯಾಸ ಆರಂಭಿಸಿದ್ದರು. ಇದನ್ನೂ ಓದಿ: ಆರ್‌ಸಿಬಿಗೆ ಸೇರಿಸಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ಫೋಟೋ ಹಂಚಿಕೊಂಡ ವಿಜಯ್ ಮಲ್ಯ

corona virus 4

ಇದೀಗ ವಿರಾಟ್ ಕೊಹ್ಲಿಗೆ ಕೊರೊನಾ ಟೆಸ್ಟ್ ವೇಳೆ ಪಾಸಿಟಿವ್ ವರದಿಯಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕ ಶರ್ಮಾ 15ನೇ ಆವೃತ್ತಿ ಐಪಿಎಲ್‌ ಬಳಿಕ ಹಾಲಿಡೇ ಎಂಜಾಯ್ ಮಾಡಲು ಮಾಲ್ಡೀವ್ಸ್‌ಗೆ ತೆರಳಿದ್ದರು. ಈ ವೇಳೆ ಕೊಹ್ಲಿಗೆ ಸೋಂಕು ತಗುಲಿತ್ತು ಇದೀಗ ಗುಣಮುಖರಾಗಿದ್ದಾರೆ ಎಂಬ ಕುರಿತು ತಂಡದ ಮೂಲಗಳಿಂದ ವರದಿಯಾಗಿದೆ. ಈ ಮೊದಲು ರವಿಚಂದ್ರನ್ ಅಶ್ವಿನ್‍ಗೆ ಕೊರೊನಾ ಕಾಣಿಸಿಕೊಂಡಿತ್ತು. ಆ ಬಳಿಕ ಅವರು ತಂಡದಿಂದ ದೂರ ಉಳಿದುಕೊಂಡು ಕ್ವಾರಂಟೈನ್‍ನಲ್ಲಿದ್ದಾರೆ. ಇದನ್ನೂ ಓದಿ: 2021-22ರ ಅವಧಿಯಲ್ಲಿ ಟೀಂ ಇಂಡಿಯಾಗೆ 6 ನಾಯಕರು

ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *