ಲಂಡನ್: ಭಾರತ (India) ಮಹಿಳಾ ಕ್ರಿಕೆಟ್ (Womens Cricket) ದಂತಕಥೆ ಜೂಲನ್ ಗೋಸ್ವಾಮಿ (Jhulan Goswami) ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿದ್ದಾರೆ. ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ ತಮ್ಮ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ ಸಿಕ್ಕಿದೆ.
Advertisement
ಇಂಗ್ಲೆಂಡ್‍ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 169 ರನ್‍ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 43.3 ಓವರ್‌ಗಳಲ್ಲಿ 153 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿತು. ಇತ್ತ ಭಾರತ 16 ರನ್‍ಗಳ ಜಯದೊಂದಿಗೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಜಯದೊಂದಿಗೆ ಟೀಂ ಇಂಡಿಯಾದ ಲೆಜೆಂಡ್ ಆಟಗಾರ್ತಿ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ ಸಿಕ್ಕಂತಾಗಿದೆ. ತನ್ನ ವೃತ್ತಿಜೀವನದ ಕೊನೆಯ ಪಂದ್ಯದಲ್ಲೂ ಜೂಲನ್ 10 ಓವರ್ ಎಸೆದು 3 ಓವರ್ ಮೇಡನ್ ಸಹಿತ 2 ವಿಕೆಟ್ ಕಿತ್ತು ಸ್ಮರಣೀಯವಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ನೇಹಿತನ ವಿದಾಯಕ್ಕೆ ಕಣ್ಣೀರಿಟ್ಟ ರಫೇಲ್ ನಡಾಲ್ – ಕ್ರೀಡೆಯ ಸುಂದರವಾದ ಕ್ಷಣ ಎಂದ ಕೊಹ್ಲಿ
Advertisement
Advertisement
39 ವರ್ಷ ವಯಸ್ಸಿನ ಜೂಲನ್, ತನ್ನ 20 ವರ್ಷಗಳ ವೃತ್ತಿಜೀವನಕ್ಕೆ ಇಂದು ಅಂತ್ಯ ಹಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 12 ಟೆಸ್ಟ್, 205 ಏಕದಿನ ಮತ್ತು 68 ಟಿ20 ಪಂದ್ಯಗಳನ್ನಾಡಿರುವ ಜೂಲನ್ ಗೋಸ್ವಾಮಿ, ಒಟ್ಟು 355 ವಿಕೆಟ್ ಕಬಳಿಸಿದ್ದಾರೆ. ಇದನ್ನೂ ಓದಿ: ಬುಮ್ರಾ ಯಾರ್ಕರ್‌ಗೆ ಫಿಂಚ್ ಶಬ್ಬಾಸ್‍ಗಿರಿ – ಪಲ್ಟಿ ಹೊಡೆದು ಬೆರಗಾದ ಸ್ಮಿತ್
Advertisement
ಬೌಲಿಂಗ್ ಜೊತೆಗೆ ಬ್ಯಾಟಿಂಗ್‍ನಲ್ಲಿ ಮೂರು ಮಾದರಿ ಕ್ರಿಕೆಟ್‍ನಲ್ಲಿ ಒಟ್ಟು 283 ಪಂದ್ಯಗಳಿಂದ 1,924 ರನ್ ಬಾರಿಸಿ ಮಹಿಳಾ ಲೆಜೆಂಡ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ವೇಗದ ಬೌಲರ್ ಆಗಿರುವ ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‍ನಲ್ಲಿ ಒಟ್ಟು 40 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್‍ಗಳ ಪಡೆದಿರುವ ದಾಖಲೆಯನ್ನು ಹೊಂದಿದ್ದಾರೆ. ಮಿಥಾಲಿ ರಾಜ್ ಬಳಿಕ ಏಕದಿನ ಕ್ರಿಕೆಟ್‍ನಲ್ಲಿ ಸುದೀರ್ಘ ವೃತ್ತಿಜೀವನವನ್ನು ಹೊಂದಿರುವ ಎರಡನೇ ಮಹಿಳಾ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಜೂಲನ್ ಗೋಸ್ವಾಮಿ 20 ವರ್ಷಕ್ಕೂ ಅಧಿಕ ದಿನ ಕ್ರಿಕೆಟ್ ಆಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ, 1,000 ರನ್, 50 ವಿಕೆಟ್ ಮತ್ತು 50 ಕ್ಯಾಚ್ ಪಡೆದಿರುವ ದಾಖಲೆಯನ್ನು ಜೂಲನ್ ಗೋಸ್ವಾಮಿ ಬರೆದಿದ್ದಾರೆ.
????????#JhulanGoswami #CricketTwitterpic.twitter.com/EZAlzIWVfu
— Asli BCCI Women- #WPL (@AsliBCCIWomen) September 24, 2022
ಜೂಲನ್ ಗೋಸ್ವಾಮಿ 2006ರಲ್ಲಿ ಇಂಗ್ಲೆಂಡ್ ವಿರುದ್ಧ ಟೌಂಟನ್‍ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‍ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆಗ ಕೇವಲ 23 ವರ್ಷ ವಯಸ್ಸಿನವರಾಗಿದ್ದ ಅವರು, ಮಹಿಳಾ ಟೆಸ್ಟ್ ಕ್ರಿಕೆಟ್‍ನಲ್ಲಿ 10 ವಿಕೆಟ್‍ಗಳನ್ನು ಪಡೆದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಡೆದಿದ್ದರು. 2006ರಲ್ಲಿ ಇಂಗ್ಲೆಂಡ್ ವಿರುದ್ಧ 78 ರನ್ ನೀಡಿ 10 ವಿಕೆಟ್ ಕಬಳಿಸಿದ್ದರು.
ಜೂಲನ್ ಜೀವನದ ಕುರಿತಾಗಿ ‘ಚಕ್ಡಾ ಎಕ್ಸ್ ಪ್ರೆಸ್’ (Chakda Xpress) ಎಂಬ ಹೆಸರಿನ ಚಿತ್ರ ಬಾಲಿವುಡ್‍ನಲ್ಲಿ ನಿರ್ಮಾಣವಾಗುತ್ತಿದೆ. ಬಾಲಿವುಡ್ ತಾರೆ ಅನುಷ್ಕಾ ಶರ್ಮಾ (Anushka Sharma) ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ʼಚಕ್ಡಾ ಎಕ್ಸ್ ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.