ಡಬ್ಲಿನ್: ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮಳೆಯಾಟದ ನಡುವೆ ಭಾರತ ತಂಡ 7 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ ಸರಣಿಯಲ್ಲಿ ಶುಭಾರಂಭ ಕಂಡಿದೆ.
Advertisement
ಮಳೆಯಿಂದಾಗಿ 12 ಓವರ್‍ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 4 ವಿಕೆಟ್ ನಷ್ಟಕ್ಕೆ 108 ಬಾರಿಸಿತು. 109 ರನ್‍ಗಳ ಗುರಿ ಬೆನ್ನಟ್ಟಿದ ಭಾರತ 9.2 ಓವರ್‌ಗಳ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 111 ರನ್ ಬಾರಿಸಿ ಇನ್ನೂ 16 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಅಂತರದ ಜಯ ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್ – ಕ್ಯಾನ್ಸಲ್ ಆಗುತ್ತಾ ಟೆಸ್ಟ್ ಪಂದ್ಯ?
Advertisement
Advertisement
111 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತದ ಪರ ದೀಪಕ್ ಹೂಡಾ ಆರಂಭಿಕರಾಗಿ ಕಣಕ್ಕಿಳಿದು ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನಸೆಳೆದರು. ಇಶಾನ್ ಕಿಶನ್ 26 ರನ್ (11 ಎಸೆತ, 3 ಬೌಂಡರಿ, 2 ಸಿಕ್ಸ್), ಹಾರ್ದಿಕ್ ಪಾಂಡ್ಯ 24 ರನ್ (12 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸಿ ತಂಡಕ್ಕೆ ನೆರವಾದರು. ಇತ್ತ ಆರಂಭಿಕರಾಗಿ ಕಣಕ್ಕಿಳಿದು ಕಡೆಯ ವರೆಗೆ ಹೋರಾಡಿದ ದೀಪಕ್ ಹೂಡಾ ಅಜೇಯ 47 ರನ್ (29 ಎಸೆತ, 6 ಬೌಂಡರಿ, 2 ಸಿಕ್ಸ್) ಚಚ್ಚಿ ತಂಡಕ್ಕೆ ಜಯ ತಂದುಕೊಟ್ಟರು. ಇದನ್ನೂ ಓದಿ: ಔಟ್ ಮಾಡಿದ ಬೌಲರ್‌ಗೆ ಮಧ್ಯದ ಬೆರಳು ತೋರಿಸಿದ CSK ಆಟಗಾರ – ಟಿಎನ್‍ಪಿಎಲ್‍ನಲ್ಲಿ ಕಿರಿಕ್
Advertisement
ಈ ಮೊದಲು ಐರ್ಲೆಂಡ್ ತಂಡದ ಆರಂಭಿಕರು ಬ್ಯಾಟಿಂಗ್‍ನಲ್ಲಿ ಮಿಂಚಲು ವಿಫಲರಾದರು. ಆ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಟೆಕ್ಟರ್ ಸಿಡಿಲ್ಲಬ್ಬರ ಬ್ಯಾಟಿಂಗ್ ಮೂಲಕ ಐರ್ಲೆಂಡ್‍ಗೆ ನೆರವಾದರು. ಹ್ಯಾರಿ ಟೆಕ್ಟರ್ ಅಜೇಯ 64 ರನ್ (33 ಎಸೆತ, 6 ಬೌಂಡರಿ, 3 ಸಿಕ್ಸ್) ಬಾರಿಸಿದ ಪರಿಣಾಮ ಐರ್ಲೆಂಡ್ ತಂಡ 12 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 108 ರನ್ ಪೇರಿಸುವಂತಾಯಿತು.