ಮುಂಬೈ: ನ್ಯೂಜಿಲೆಂಡ್ ಸ್ಪಿನ್ನರ್ ಭಾರತೀಯ ಮೂಲದ ಅಜಾಜ್ ಪಟೇಲ್ ಟೆಸ್ಟ್ ಕ್ರಿಕೆಟ್ ಇನ್ನಿಂಗ್ಸ್ ಒಂದರಲ್ಲಿ 10 ವಿಕೆಟ್ ಕಿತ್ತು ಇತಿಹಾಸ ನಿರ್ಮಿಸಿದ್ದಾರೆ.ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಲ್ಲಾ 10 ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೊದಲು ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ಎಲ್ಲಾ 10 ವಿಕೆಟ್ ಪಡೆದಿದ್ದರು. 144 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ದಾಖಲೆಯನ್ನು ಅಜಾಜ್ ಪಟೇಲ್ ಬರೆದಿದ್ದಾರೆ.
Advertisement
Advertisement
ಮುಂಬೈ ಮೂಲದ ಅಜಾಜ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 325 ರನ್‌ಗಳಿಗೆ ಆಲೌಟ್ ಆಗಿದೆ.
Advertisement
47.5 ಓವರ್ ಎಸೆದ ಅಜಾಜ್ ಪಟೇಲ್ 12 ಓವರ್ ಮೇಡನ್ ಎಸೆದು 119 ರನ್ ನೀಡಿ 10 ವಿಕೆಟ್ ಪಡೆದಿದ್ದಾರೆ. ಭಾರತದಲ್ಲಿ ನೆಲದಲ್ಲಿ ಈ ಸಾಧನೆ ಮಾಡಿದ ಎರಡನೇ ಬೌಲರ್ ಅಜಾಜ್ ಪಟೇಲ್ ಆಗಿದ್ದಾರೆ. ಅಷ್ಟೇ ಅಲ್ಲದೇ ಭಾರತದ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. 5 ಮಂದಿ ಆಟಗಾರರು ಕ್ಯಾಚ್ ನೀಡಿ ಔಟಾಗಿದ್ದರೆ 3 ಮಂದಿ ಎಲ್‌ಬಿಡಬ್ಲ್ಯೂ, ಇಬ್ಬರನ್ನು ಅಜಾಜ್ ಬೌಲ್ಡ್ ಮಾಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ನಡುವೆಯೂ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ
Advertisement
1956ರಲ್ಲಿ ಇಂಗ್ಲೆಂಡ್‌ನ ಆಫ್ ಸ್ಪಿನ್ನರ್ ಜಿಮ್ ಲೇಕರ್, ಆಸ್ಟ್ರೇಲಿಯಾ ವಿರುದ್ದ 10 ವಿಕೆಟ್ ಕಿತ್ತಿದ್ದರು. 1999ರಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ದೆಹಲಿಯ ಫಿರೋಜ್ ಶಾ ಕೋಟ್ಲಾ(ಅರುಣ್ ಜೇಟ್ಲಿ ಮೈದಾನ) ಮೈದಾನದಲ್ಲಿ ಪಾಕಿಸ್ತಾನ ವಿರುದ್ದ ಎಲ್ಲಾ 10 ವಿಕೆಟ್ ಕಬಳಿಸಿ ಭಾರತದ ಪರ ದಾಖಲೆ ನಿರ್ಮಿಸಿದ್ದರು.
ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ 221 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ಅಜಾಜ್ ಪಟೇಲ್ ಆರಂಭದಲ್ಲೇ ಶಾಕ್ ನೀಡಿದರು. ಇದನ್ನೂ ಓದಿ: ಕೆಬಿಸಿ ನಿರೂಪಣೆ ಒಪ್ಪಿಕೊಳ್ಳಲು ನಿಜವಾದ ಕಾರಣ ಬಿಚ್ಚಿಟ್ಟ ಬಿಗ್ ಬಿ
Incredible achievement as Ajaz Patel picks up all 10 wickets in the 1st innings of the 2nd Test.
He becomes the third bowler in the history of Test cricket to achieve this feat.#INDvNZ @Paytm pic.twitter.com/5iOsMVEuWq
— BCCI (@BCCI) December 4, 2021
ತಾವೆಸೆದ ಮೊದಲ ಓವರ್‌ನಲ್ಲೇ ಅಜಾಜ್ ಪಟೇಲ್ ಸತತ 2 ವಿಕೆಟ್ ಕಿತ್ತಿದ್ದರು. ಮಯಾಂಕ್ ಅಗರ್‌ವಾಲ್ 150 ರನ್(311 ಎಸೆತ, 17 ಬೌಂಡರ್, 4 ಸಿಕ್ಸರ್) ಹೊಡೆದು 8ನೇಯವರಾಗಿ ಔಟಾದರು. ವೃದ್ಧಿಮಾನ್ ಸಹಾ 27 ರನ್, ಅಕ್ಷರ್ ಪಟೇಲ್ 52 ರನ್(128 ಎಸೆತ, 5 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು. ಅಂತಿಮವಾಗಿ ಭಾರತ 109.5 ಓವರ್‌ಗಳಲ್ಲಿ 325 ರನ್ ಗಳಿಸಿತು.