ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಅಶ್ವಿನ್ ಮಾಜಿ ನಾಯಕ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಈ ವರ್ಷ ಅಶ್ವಿನ್ 50 ವಿಕೆಟ್ ಕಿತ್ತಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಒಂದೇ ವರ್ಷದ 4ನೇ ಬಾರಿ 50 ವಿಕೆಟ್ ಪಡೆದ ಆಟಗಾರನಾಗಿ ಹೊರ ಹೊಮ್ಮಿದ್ದಾರೆ.
Advertisement
ಈ ಹಿಂದೆ ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಮೂರು ಬಾರಿ ಒಂದೇ ವರ್ಷದಲ್ಲಿ 50 ವಿಕೆಟ್ ಕಿತ್ತಿದ್ದರು. ನ್ಯೂಜಿಲೆಂಡ್ ನಾಯಕ, ಆರಂಭಿಕ ಬ್ಯಾಟ್ಸ್‌ಮನ್ ಟಾಮ್ ಲಾಥಮ್ ಅವರನ್ನು ಎಲ್‌ಬಿಗೆ ಕೆಡವುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಚಿನ್ನದ ಹುಡುಗನಿಗೆ ಮೋದಿ ಚಪ್ಪಾಳೆ
Advertisement
Advertisement
50ಕ್ಕೂ ಹೆಚ್ಚು ವಿಕೆಟ್ ಕಿತ್ತ ಬೌಲರ್‌ಗಳು
ಅಶ್ವಿನ್ : 2015, 2016, 2017, 2021
ಅನಿಲ್ ಕುಂಬ್ಳೆ : 1999, 2004, 2006
ಹರ್ಭಜನ್ ಸಿಂಗ್ : 2001, 2002, 2008
ಕಪಿಲ್ ದೇವ್ : 1979, 1983
Advertisement
ಮೂರನೇ ದಿನದಾಟದಲ್ಲಿ 17 ಓವರ್‌ಗಳನ್ನು ಎಸೆದ ಆಫ್ ಸ್ಪಿನ್ನರ್ ಆರ್. ಅಶ್ವಿನ್ 3 ವಿಕೆಟ್ ಪಡೆದಿದ್ದಾರೆ. ಭಾರತ ಪಂದ್ಯ ಗೆಲ್ಲಲು ಇನ್ನೂ 5 ವಿಕೆಟ್‌ಗಳ ಅಗತ್ಯವಿದೆ. ಇದನ್ನೂ ಓದಿ: ಬೌಲ್ಡಾದರೂ DRS ಮೊರೆ ಹೋಗಿ ಲೆಜೆಂಡ್ ಎನಿಸಿಕೊಂಡ ಅಶ್ವಿನ್
ಶನಿವಾರ ವಿಕೆಟ್ ನಷ್ಟವಿಲ್ಲದೇ 69 ರನ್‌ಗಳಿಸಿದ್ದ ಟೀಂ ಇಂಡಿಯಾ ಇಂದು 70 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿದ್ದಾಗ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ಮಯಾಂಕ್ ಅಗರ್‌ವಾಲ್ 62 ರನ್(108 ಎಸೆತ, 9 ಬೌಂಡರಿ, 1 ಸಿಕ್ಸರ್), ಚೇತೇಶ್ವರ ಪೂಜಾರ 47 ರನ್(97 ಎಸೆತ, 6 ಬೌಂಡರಿ, 1 ಸಿಕ್ಸರ್), ಶುಭಮನ್ ಗಿಲ್ 47 ರನ್(75 ಎಸೆತ, 4 ಬೌಂಡರಿ, 1 ಸಿಕ್ಸರ್), ವಿರಾಟ್ ಕೊಹ್ಲಿ 36 ರನ್(84 ಎಸೆತ, 1 ಬೌಂಡರಿ, 1 ಸಿಕ್ಸರ್), ಅಕ್ಷರ್ ಪಟೇಲ್ ಔಟಾಗದೇ 41 ರನ್(26 ಎಸೆತ, 3 ಬೌಂಡರಿ, 4 ಸಿಕ್ಸರ್) ಸಿಡಿಸಿದರು.
ಗೆಲ್ಲಲು 540 ರನ್‌ಗಳ ಬೃಹತ್ ಗುರಿಯನ್ನು ಪಡೆದ ನ್ಯೂಜಿಲೆಂಡ್ 45 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದೆ.
ಡ್ಯಾರಿಲ್ ಮಿಚೆಲ್ 60 ರನ್(92 ಎಸೆತ, 7 ಬೌಂಡರಿ, 2 ಸಿಕ್ಸರ್) ಸಿಡಿಸಿ ಔಟಾದರೆ ಹೆನ್ರಿ ನಿಕೊಲಸ್ ಔಟಾಗದೇ 36 ರನ್(86 ಎಸೆತ, 7 ಬೌಂಡರಿ) ಹೊಡೆದು ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಶ್ವಿನ್ ಮೂರು ವಿಕೆಟ್ ಪಡೆದರೆ ಅಕ್ಷರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.