ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

Public TV
2 Min Read
BENGALURU 1

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ನಡೆಯಲಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.

chinnaswamy stadium 768x427 1

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಪೊಲೀಸ್ ಇಲಾಖೆ, ಜೂನ್ 19 ರಂದು ಮದ್ಯಾಹ್ನ 2 ಗಂಟೆಯಿಂದ ರಾತ್ರಿ 12.30ರವರೆಗೆ ಈ ಎಲ್ಲಾ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ವೀನ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ ವೃತ್ತದಿಂದ ಕಾಮರಾಜ ರಸ್ತೆ ವರೆಗೆ ರಸ್ತೆಯ ಎರಡು ಕಡೆಗಳಲ್ಲಿ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

IND VS SA 1

ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‍ನಿಂದ ಡಿಕೆನ್ಸ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್‍ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‍ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆ ವರೆಗೆ., ಕಸ್ತೂರಬಾ ರಸ್ತೆಯಲ್ಲಿ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ, ಕಬ್ಬನ್‍ಪಾರ್ಕ್ ಒಳಭಾಗದ ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಫೌಟೇನ್ ರಸ್ತೆ. ಲ್ಯಾವೆಲ್ಲಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ಜಂಕ್ಷನ್ ವರೆಗೆ, ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧವಿದೆ. ಇದನ್ನೂ ಓದಿ:  ಏಕದಿನ ಕ್ರಿಕೆಟ್‍ನಲ್ಲಿ ದಾಖಲೆಯ 498 ರನ್ ಸಿಡಿಸಿದ ಇಂಗ್ಲೆಂಡ್ – ಮೈದಾನದೆಲ್ಲೆಡೆ ಸಿಕ್ಸರ್, ಬೌಂಡರಿಗಳ ಅಬ್ಬರ

ಜೊತೆಗೆ ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳಿಗೆ ಬದಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಈಗಾಗಲೇ ಮೆಟ್ರೋ ಸಮಯವನ್ನೂ ವಿಸ್ತರಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿದ್ದು, 5ನೇ ಪಂದ್ಯ ಗೆದ್ದವರು ಸರಣಿ ಜಯಿಸಲಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *