CricketLatestLeading NewsMain PostSports

ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

ಮುಂಬೈ: ದಕ್ಷಿಣ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್‍ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ. ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ಪರ ಅಬ್ಬರಿಸಿದ ದಿನೇಶ್ ಕಾರ್ತಿಕ್‍ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಐಪಿಎಲ್‍ನಲ್ಲಿ ಮಿಂಚುಹರಿಸಿರುವ ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ತಂಡದಲ್ಲಿ ಕಾಣಿಸಿರುವ ಹೊಸ ಮುಖಗಳಾಗಿವೆ. ಇದನ್ನೂ ಓದಿ: ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಕೊಹ್ಲಿ, ಜಡೇಜಾ ಮತ್ತು ಬುಮ್ರಾ ಕಂಬ್ಯಾಕ್ ಮಾಡಿದ್ದು, ಚೇತೇಶ್ವರ ಪೂಜಾರಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಲಾಗಿದೆ. ಶಿಖರ್‌ ಧವನ್‌, ಇಶಾಂತ್ ಶರ್ಮಾ ಮತ್ತು ಅಜಿಂಕ್ಯಾ ರಹಾನೆಯನ್ನು ತಂಡದಿಂದ ಕೈಬಿಡಲಾಗಿದೆ. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

ಟಿ20 ತಂಡ:
ಕೆ.ಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ವೈ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಟೆಸ್ಟ್ ತಂಡ:
ರೋಹಿತ್ ಶರ್ಮಾ (ಕ್ಯಾಪ್ಟನ್), ಕೆಎಲ್ ರಾಹುಲ್ (VC), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (WK), ಕೆಎಸ್ ಭರತ್ (WK), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ಟಿ20 ಸರಣಿ ಜೂನ್‌ 9 ರಿಂದ ಆರಂಭವಾಗುತ್ತಿದೆ.

 

 

Leave a Reply

Your email address will not be published.

Back to top button