ಮುಂಬೈ: ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಗೆಲುವಿನ ಅಜೇಯ ಓಟವನ್ನು ಮುಂದುವರಿಸಿ ನೂತನ ದಾಖಲೆಯತ್ತ ಕಣ್ಣಿಟ್ಟಿದೆ.
ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿಯಲ್ಲಿ ಭಾರತ ತಂಡ ನೂತನ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಹೊಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿ ನಾಳೆ ಆರಂಭಗೊಳ್ಳಲಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್
ಟೀಂ ಇಂಡಿಯಾ 2021ರ ಟಿ20 ವಿಶ್ವಕಪ್ ಬಳಿಕ ಸತತ 12 ಟಿ20 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಅಫ್ಘಾನಿಸ್ತಾನ ಮತ್ತು ರೊಮೇನಿಯಾ ಜೊತೆ ಕಾಣಿಸಿಕೊಂಡಿದೆ. ಈ ಎರಡು ತಂಡಗಳು ಕೂಡ ಸತತ 12 ಪಂದ್ಯಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಇದೀಗ ಟೀಂ ಇಂಡಿಯಾ ನಾಳೆ ನಡೆಯಲಿರುವ ಪಂದ್ಯ ಗೆದ್ದರೆ ಸತತ 13 ಪಂದ್ಯಗಳನ್ನು ಗೆದ್ದ ತಂಡವೆಂಬ ದಾಖಲೆ ಬರೆಯಲಿದೆ.
2021ರ ವಿಶ್ವಕಪ್ನಲ್ಲಿ ಸತತ ಮೂರು ಗೆಲುವಿನೊಂದಿಗೆ ಆರಂಭವಾದ ಗೆಲುವಿನ ನಾಗಾಲೋಟ ಆ ಬಳಿಕ ರೋಹಿತ್ ಶರ್ಮಾ ನೇತೃತ್ವದಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡಿತ್ತು. ಈ ಮೂಲಕ ಆಡಿದ ಎಲ್ಲಾ 12 ಟಿ20 ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು, ಇದೀಗ ಈ ಗೆಲುವಿನ ಹಜ್ಜೆಯನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿ ಟೀಂ ಇಂಡಿಯಾ ಇದೆ. ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ದಾಖಲೆ ಬರೆದ ವಿರಾಟ್ ಕೊಹ್ಲಿ