ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ನಾಯಕರಾಗಿ ಭಾರತೀಯ ಆಟಗಾರರ ಯಶಸ್ಸು ಅಂತಿಮವಾಗಿ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಪ್ರಯೋಜನವಾಗಿದೆ. ಏಕೆಂದರೆ ನಾಯಕತ್ವದ ಪಾತ್ರವು ಕ್ರಿಕೆಟಿಗರ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರ್ದಿಕ್ ಪಾಂಡ್ಯ ತಮ್ಮ ನಾಯಕತ್ವದ ಮೊದಲ ಐಪಿಎಲ್ ಆವೃತ್ತಿಯಲ್ಲಿಯೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಚೊಚ್ಚಲ ಪ್ರಶಸ್ತಿಯನ್ನು ನೀಡಿದ್ದಾರೆ. ಹಾಗೆಯೇ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸಂಜು ಸಾಮ್ಸನ್ ಐಪಿಎಲ್ 2022ರಲ್ಲಿ ತಮ್ಮ ತಂಡಗಳ ನಾಯಕತ್ವದ ಜವಾಬ್ದಾರಿಯನ್ನು ಅತ್ಯಂತ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದರು.
Advertisement
Advertisement
ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ಲೇಆಫ್ ಹಂತದವರೆಗೂ ತೆಗೆದುಕೊಂಡು ಹೋಗಿದ್ದಾರೆ. ಅದೇ ರೀತಿಯಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸಾಮ್ಸನ್ ಕೂಡಾ ತಮ್ಮ ತಂಡವನ್ನು ಫೈನಲ್ ಹಂತದವರೆಗೂ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಲ್ ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ
Advertisement
Advertisement
ನಮ್ಮಲ್ಲಿ ಬಹಳಷ್ಟು ಭಾರತೀಯ ನಾಯಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಅದ್ಭುತವಾಗಿದೆ. ಹಾರ್ದಿಕ್ ಅವರಲ್ಲಿ ಒಬ್ಬ ಅದ್ಭುತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಯುವ ಬ್ಯಾಟ್ಸ್‌ಮ್ಯಾನ್‌ಗಳು ಮತ್ತು ಆಲ್‍ರೌಂಡರ್‌ಗಳು ತಮ್ಮ ತಂಡವನ್ನು ಮುನ್ನಡೆಸುವುದನ್ನು ನೋಡುತ್ತಿದ್ದರೆ ನಿಜಕ್ಕೂ ಅದ್ಭುತವೆನಿಸುತ್ತದೆ. ಇದು ಆಟಗಾರರಾಗಿ ಬೆಳೆಯಲು ಮತ್ತು ತಂಡಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಭಾರತದ ಕಿರಿಯ ಆಟಗಾರರು ಐಪಿಎಲ್‍ನಲ್ಲಿ ಉತ್ತಮ ಮುನ್ನಡೆ ಸಾಧಿಸುತ್ತಿರುವುದು ನಿಜಕ್ಕೂ ನಮ್ಮ ದೃಷ್ಟಿಕೋನದಿಂದ ಅದ್ಭುತವಾಗಿದೆ ಎಂದು ಹೇಳಿದರು.
ಈಗಾಗಲೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಆಫ್ರಿಕಾ ವಿರುದ್ಧ ಭಾರತ ಕಣಕ್ಕಿಳಿದಿದೆ. ಭಾರತೀಯ ತಂಡದಲ್ಲಿ ಹಲವಾರು ಹೊಸ ಮುಖಗಳನ್ನು ಹೆಸರಿಸಲಾಗಿದೆ. ಇದನ್ನೂ ಓದಿ: ಐಪಿಎಲ್ ಮಾಧ್ಯಮ ಪ್ರಸಾರ ಹಕ್ಕು ಹರಾಜಿನಿಂದ ಹಿಂದೆ ಸರಿದ ಅಮೆಜಾನ್
ಕಳೆದ ವರ್ಷ ಟಿ-20 ವಿಶ್ವಕಪ್‍ನಿಂದ ತಂಡವು ನಿರಾಶಾದಾಯಕವಾಗಿ ಗುಂಪು ಸುತ್ತಿನ ನಿರ್ಗಮನದ ನಂತರ ಬೆನ್ನಿನೋವಿನೊಂದಿಗೆ ಹೋರಾಡಿದ ಮತ್ತು ತಂಡದಿಂದ ಕೈಬಿಡಲ್ಪಟ್ಟ ಪಾಂಡ್ಯ, ಮತ್ತೆ ಐಪಿಎಲ್‍ನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‍ಗೆ ಮರಳಿದ್ದಾರೆ. ಅವರು ಗುಜರಾತ್ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ಆಲ್‍ರೌಂಡರ್ ಆಟದಿಂದ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಅವರನ್ನು ಮರಳಿ ಪಡೆದಿರುವುದು ನಿಜಕ್ಕೂ ಸಂತಸ ತಂದಿದೆ. ಅವರು ಏಕದಿನ ಕ್ರಿಕೆಟ್‍ನಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ. ಈ ಐಪಿಎಲ್‍ನಲ್ಲೂ ಉತ್ತಮ ಫಾರ್ಮ್ ಅನ್ನು ತೋರಿಸಿದ್ದಾರೆ ಎಂದು ಹೇಳಿದರು.