ಮುಂಬೈ: ನಾಯಕ ಟೆಂಬಾ ಬವುಮಾ, ಹೆನ್ರಿಚ್ ಕ್ಲಾಸೆನ್ ಅವರ ಬ್ಯಾಟಿಂಗ್ ಆಸರೆಯಿಂದ ದಕ್ಷಿಣ ಆಫ್ರಿಕಾ ಟೀಂ ಇಂಡಿಯಾ ವಿರುದ್ಧ ನಡೆದ T20 ಸರಣಿಯ 2ನೇ ಪಂದ್ಯದಲ್ಲಿ 4 ವಿಕೆಟ್‌ಗಳ ಜಯ ಸಾಧಿಸಿತು.
ಒಡಿಶಾದ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148ರನ್ ಗಳಿಸಿ, ಎದುರಾಳಿ ದಕ್ಷಿಣ ಆಫ್ರಿಕಾಗೆ 149 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನಿಗದಿತ 18.2 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 149 ರನ್‌ಗಳಿಸುವ ಮೂಲಕ ಸತತ 2ನೇ ಗೆಲುವು ದಾಖಲಿಸಿತು.
Advertisement
Advertisement
ಆರಂಭದಲ್ಲೇ ಆಘಾತ: ಹಿಂದಿನ ಪಂದ್ಯದಂತೆಯೇ ಆರಂಭದಲ್ಲೇ ಆಘಾತ ಎದುರಿಸಿದ ದಕ್ಷಿಣ ಆಫ್ರಿಕಾ ತಂಡವು ಪವರ್ ಪ್ಲೇ ನಲ್ಲೇ 3 ವಿಕೆಟ್‌ಗಳನ್ನು ಕಳೆದುಕೊಂಡಿತು. 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಬೌಲರ್‌ಗಳ ಪರಾಕ್ರಮಕ್ಕೆ ದಕ್ಷಿಣ ಆಫ್ರಿಕಾ ತಂಡ ಹೈರಾಣಾಗಿತ್ತು. ಇದರಿಂದ ಟೀಂ ಇಂಡಿಯಾ ಗೆಲುವಿನ ವಿಶ್ವಾಸವನ್ನೂ ಕಂಡಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹೆನ್ರಿಚ್ ಕ್ಲಾಸೆನ್ ನಿಧಾನಗತಿಯಲ್ಲೇ ಬ್ಯಾಟಿಂಗ್ ಆರಂಭಿಸಿ, ನಂತರ ಭಾರತದ ಬೌಲರ್‌ಗಳ ಬೆವರಿಳಿಸಿದರು. ಇದನ್ನೂ ಓದಿ: ಮಿಂಚಿದ ಮಿಲ್ಲರ್, ಡುಸ್ಸೆನ್ – ದಕ್ಷಿಣ ಆಫ್ರಿಕಾಗೆ 7 ವಿಕೆಟ್‌ಗಳ ಜಯ
Advertisement
ಆರಂಭಿಕ ಆಟಗಾರ ತೆಂಬಾ 30 ಎಸೆತಗಳಲ್ಲಿ 1 ಸಿಕ್ಸರ್, 4 ಬೌಂಡರಿಯೊಂದಿಗೆ 35 ರನ್‌ಗಳಿಸಿದರೆ, ರೀಜಾ ಹೆಂಡ್ರಿಕ್ಸ್ ಹಾಗೂ ವೇಯ್ನ್ ಪಾರ್ನೆಲ್ ತಲಾ 4 ರನ್‌ಗಳಿಸಿ ಪೆವಿಲಿಯನ್ ಸೇರಿದರು. ಕಳೆದ ಬಾರಿ ಆಕರ್ಷಕ ಅರ್ಧ ಶತಕಗಳಿಸಿದ್ದ ಡುಸ್ಸೆನ್ ಕೇವಲ 1 ರನ್‌ಗಳಿಸಿ ಮಂಡಿಯೂರಿದರು.
Advertisement
ನಂತರ ಹೆನ್ರಿಚ್ ಕ್ಲಾಸೆನ್ 46 ಎಸೆತಗಳಲ್ಲಿ 81 ರನ್ ( 5 ಸಿಕ್ಸರ್, 7 ಬೌಂಡರಿ) ಅಬ್ಬರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದಕ್ಕೆ ಸಾತ್ ನೀಡಿದ ಡೇವಿಡ್ ಮಿಲ್ಲರ್ 15 ಎಸೆತಗಳಲ್ಲಿ 20 ರನ್‌ಗಳಿಸಿ ಅಜೇಯರಾಗುಳಿದರು. ವೇಯ್ನ್ ಪಾರ್ನೆಲ್ 1 ರನ್‌ಗಳಿಸಿ ಪೆವಿಲಿಯನ್ ಸೇರಿದರು.
ಉತ್ತಮ ಬೌಲಿಂಗ್: 4 ಓವರ್ ಮಾಡಿದರೂ, ಕೇವಲ 15ರನ್ ನೀಡಿದ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 1 ವಿಕೆಟ್ ಗಳಿಸಿದರು. 4 ಓವರ್‌ಗಳಲ್ಲಿ 36 ರನ್ ನೀಡಿದ ಅನ್ರಿಚ್ ನಾರ್ಕಿಯಾ 2 ವಿಕೆಟ್ ಗಳಿಸಿ ಸೈ ಎನಿಸಿಕೊಂಡರು.
ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಗೆ 149 ರನ್‌ಗಳ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ 4 ಎಸೆತಗಳಲ್ಲಿ 1 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಮತ್ತೋರ್ವ ಆರಂಭಿಕನಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ಹಾಗೂ 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಶ್ರೇಯಸ್ ಅಯ್ಯರ್ ಜೊತೆಯಾಟ ಟೀಂ ಇಂಡಿಯಾಗೆ ಆಸರೆಯಾಯಿತು.
ಇಶಾನ್ ಕಿಶನ್ 21 ಎಸೆತಗಳಲ್ಲಿ 34 ರನ್ (3 ಸಿಕ್ಸರ್, 2 ಬೌಂಡರಿ) ಕಲೆಹಾಕಿದರೆ, ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ ಜವಾಬ್ದಾರಿಯುತ 40 ರನ್ (2 ಬೌಂಡರಿ, 2 ಸಿಕ್ಸರ್) ಗಳಿಸಿ ಇನ್ನಿಂಗ್ಸ್ ಕಟ್ಟಿದರು.
ನಂತರದಲ್ಲಿ ಕ್ರೀಸ್‌ಗಿಳಿದ ರಿಷಭ್ ಪಂತ್ 5 ರನ್, ಹಾರ್ದಿಕ್ ಪಾಂಡ್ಯ 9 ರನ್, ಅಕ್ಷರ್ ಪಟೇಲ್ 10 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆದರೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 2 ಬೌಂಡರಿಯೊಂದಿಗೆ 30 ರನ್ ಸಿಡಿಸಿ ಗಮನ ಸೆಳೆದರು.
ಭುವನೇಶ್ವರ್ ಕುಮಾರ್ ಬೌಲಿಂಗ್ ಮಿಂಚು: ಟೀಂ ಇಂಡಿಯಾದಲ್ಲಿ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ ಕೇವಲ 13 ರನ್ ನೀಡಿ 4 ವಿಕೆಟ್‌ಗಳನ್ನು ಪಡೆದರು.