ಕೊಲಂಬೊ: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದರು. ರಿಷಭ್ ಪಂತ್ ಮತ್ತೊಂದು ಅರ್ಧಶತಕ ಬಾರಿಸಿದರು. ದಿನದ ಕೊನೆಗೆ ಬೌಲರ್‌ಗಳು 2 ವಿಕೆಟ್ ಪಡೆದು 2ನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಲು ನೆರವಾದರು.
2ನೇ ದಿನವಾದ ಸೋಮವಾರ ಜುರೇಲ್ ಶತಕ (115 ರನ್, 117 ಎಸೆತ) ಹಾಗೂ ಪಂತ್ 63 ಅರ್ಧಶತಕ ಭಾರತಕ್ಕೆ ಮಹತ್ವದ್ದಾಗಿತ್ತು. 5 ವಿಕೆಟ್‌ಗೆ 300 ರನ್‌ಗಳೊಡನೆ ದಿನದಾಟ ಮುಂದುವರಿಸಿತು. ಭಾರತ 9 ವಿಕೆಟ್‌ಗೆ 503 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ನಂತರ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಇನ್ನಿಂಗ್ಸ್‌ನಲ್ಲಿ ಆರಂಭದಲ್ಲೇ ಕಳಪೆ ಪ್ರದರ್ಶನ ಕಂಡುಬಂದಿತು. 8 ರನ್‌ಗಳಿಗೆ ತಂಡ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ. ಲಂಕಾ ತಂಡ 495 ರನ್‌ಗಳಿಂದ ಹಿನ್ನಡೆ ಅನುಭವಿಸಿದೆ.
ಟೀಂ ಇಂಡಿಯಾ ಪರ ಪ್ರಸಿದ್ಧ್ ಕೃಷ್ಣ ಮತ್ತು ಮಾವನ್ ಸುತಾರ್ ತಲಾ 1 ವಿಕೆಟ್ ಪಡೆದಿದ್ದಾರೆ.
