ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ.
Advertisement
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದಿನಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಡೇ-ನೈಟ್ ಪಿಂಕ್ ಬಾಲ್ ಟೆಸ್ಟ್ ನಡೆಯುತ್ತಿದೆ. ಕೊರೊನಾ ಕಾಟದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಪಂದ್ಯಗಳು ನಡೆದಿರಲಿಲ್ಲ. ಇದೀಗ 2 ವರ್ಷಗಳ ಬಳಿಕ ಟೀಂ ಇಂಡಿಯಾ ಚಿನ್ನಸ್ವಾಮಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಅಲ್ಲದೆ ಟೆಸ್ಟ್ ಪಂದ್ಯ ವೀಕ್ಷಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರೇಕ್ಷಕರಿಗೂ ಪ್ರವೇಶ ನೀಡಲಾಗಿದೆ. ಇದರಿಂದ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕೂತು ಕೊರೊನಾ ಅಡೆತಡೆಗಳ ಬಳಿಕ ಪಂದ್ಯ ವೀಕ್ಷಿಸುತ್ತಿದ್ದಾರೆ. ಇದನ್ನೂ ಓದಿ: ಐಸಿಸಿ ಮಹಿಳಾ ವಿಶ್ವಕಪ್ 2022: ಬೃಹತ್ ದಾಖಲೆ ಬರೆದ ಮಿಥಾಲಿ ರಾಜ್
Advertisement
Advertisement
ಕೊಹ್ಲಿ ವಿಶೇಷ ಆಕರ್ಷಣೆ:
ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಬರೋಬ್ಬರಿ 28 ತಿಂಗಳುಗಳು ಕಳೆದಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್ ಆಡುವ ವಿರಾಟ್ ಕೊಹ್ಲಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣ ತವರು ಅಂಗಣವಾಗಿದೆ. ಹಾಗಾಗಿ ಕೊಹ್ಲಿಯ ಶತಕದ ಬರ ನೀಗುವ ಸಾಧ್ಯತೆ ಇದೆ. ಮತ್ತೊಂದೆಡೆ ಕೊಹ್ಲಿ ಕೊನೆಯ ಶತಕ ಸಿಡಿಸಿದ್ದು ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿಯೇ ಆಗಿದ್ದು, ಹಾಗಾಗಿ ಬೆಂಗಳೂರಿನಲ್ಲಿ ನಡೆಯುವ ಟೆಸ್ಟ್‌ನಲ್ಲಿ ಕೊಹ್ಲಿ ಬ್ಯಾಟ್‍ನಿಂದ ಶತಕ ಸಿಡಿಯಬಹುದೆಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ರಾಯಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಲಸಿತ್ ಮಾಲಿಂಗ ನೇಮಕ
Advertisement
ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧ ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಪಡೆದುಕೊಂಡಿದೆ. ಹಾಗಾಗಿ ಎರಡನೇ ಪಂದ್ಯದಲ್ಲೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಸಾಧಿಸುವ ನಿರೀಕ್ಷೆಯಲ್ಲಿದೆ. ಎರಡನೇ ಪಂದ್ಯಕ್ಕೆ ಸಿದ್ಧವಾಗಿರುವ ಶ್ರೀಲಂಕಾ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ. ಲಂಕಾ ವೇಗಿ ದುಷ್ಮಂತ್ ಚಮೀರ ಗಯಾಳುವಾಗಿದ್ದಾರೆ ಎಂದು ವರದಿಯಾಗಿದೆ.
ಟೀಂ ಇಂಡಿಯಾಗೆ ಕೊನೆಯ ತವರಿನ ಸರಣಿ:
ಟೀಂ ಇಂಡಿಯಾಗೆ ಇಂದಿನ ಚಿನ್ನಸ್ವಾಮಿ ಪಂದ್ಯ 2022ರ ಕೊನೆಯ ತವರಿನ ಸರಣಿ ಐಪಿಎಲ್ ಬಳಿಕ ಭಾರತ ತಂಡ ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಹಾಗಾಗಿ ಕೊನೆಯ ತವರಿನ ಪಂದ್ಯ ಗೆದ್ದು ವಿದೇಶಿ ಪ್ರವಾಸಕ್ಕೆ ಭಾರತ ಅಣಿಯಾಗಬೇಕಾಗಿದೆ. ಇದನ್ನೂ ಓದಿ: ಮಂಕಡ್‌ಗೆ ಸಮ್ಮತಿ – ಬಾಲ್ ಎಸೆಯುವ ಮುನ್ನ ನಾನ್‍ಸ್ಟ್ರೈಕ್ ಬಿಟ್ಟರೆ ಉಳಿಗಾಲವಿಲ್ಲ
How excited are you for the pink-ball Test! ???? ????
LIVE action starts in a few hours! ⏳#TeamIndia | #INDvSL | @Paytm pic.twitter.com/aL7qfakYZU
— BCCI (@BCCI) March 12, 2022
ಪಿಂಕ್ ಬಾಲ್ ರೆಕಾರ್ಡ್:
ಇದುವರೆಗೂ ಮೂರು ಪಿಂಕ್ ಬಾಲ್ ಟೆಸ್ಟ್ ಆಡಿರುವ ಟೀಂ ಇಂಡಿಯಾ. ಎರಡು ಪಂದ್ಯಗಳಲ್ಲಿ ಗೆಲುವು ಮತ್ತು ಒಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ವಿರುದ್ಧ ಡೇ-ನೈಟ್ ಟೆಸ್ಟ್ ಪಂದ್ಯ ಜಯಿಸಿದ್ರೆ, ಆಸ್ಟ್ರೇಲಿಯಾ ವಿರುದ್ಧ ಸೋತಿದೆ. ಇದೀಗ ಲಂಕಾ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.