ಟ್ರಿನಿಡಾಡ್: ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ (West Indies) ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಇಶಾನ್ ಕಿಶನ್ (Ishan Kishan) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಸತತ ಮೂರು ಪಂದ್ಯಗಳಲ್ಲೂ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ.
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು. ಅಲ್ಲದೇ, ಈ ಸಾಧನೆ ಮಾಡಿದ ಟೀಂ ಇಂಡಿಯಾದ (Team India) 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆಯನ್ನ ಲೆಜೆಂಡ್ ಮಹಿ ನಿರ್ಮಿಸಿದ್ದರು.
Advertisement
Advertisement
2019 ರಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆದ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ಧೋನಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದರು. 1982ರಲ್ಲಿ ಕ್ರಿಸ್ ಶ್ರೀಕಾಂತ್, 1985ರಲ್ಲಿ ದಿಲೀಪ್ ವೆಂಗ್ ಸರ್ಕಾರ್, 1993ರಲ್ಲಿ ಮೊಹಮ್ಮದ್ ಅಜರುದ್ದೀನ್, 2020 ರಲ್ಲಿ ಶ್ರೇಯಸ್ ಅಯ್ಯರ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಅರ್ಧ ಶತಕ ಸಿಡಿಸಿದ ದಾಖಲೆ ಮಾಡಿದ್ದರು. ಈಗ ಇಶಾನ್ ಕಿಶನ್ ಈ ಸಾಧನೆ ಮಾಡಿದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: T20 ಸರಣಿಗೆ ವಿಂಡೀಸ್ ಬಲಿಷ್ಠ ತಂಡ ಪ್ರಕಟ – ನಿಕೋಲಸ್ ಪೂರನ್ ಈಸ್ ಬ್ಯಾಕ್
Advertisement
Advertisement
ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ 55 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೊಂದಿಗೆ 55 ರನ್, 2ನೇ ಏಕದಿನ ಪಂದ್ಯದಲ್ಲಿ 46 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್‌ನೊಂದಿಗೆ 52 ರನ್ ಗಳಿಸಿದ್ದರು. 3ನೇ ಪಂದ್ಯದಲ್ಲಿ 64 ಎಸೆತಗಳಲ್ಲಿ 77 ರನ್ ಚಚ್ಚುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ವಿಂಡೀಸ್ ವಿರುದ್ಧ ನಡೆದ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 351 ರನ್ ಕಲೆಹಾಕಿತು. ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್ – ಐರ್ಲೆಂಡ್ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್
Web Stories