ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಹೊರ ರಾಜ್ಯದ ಯುವಕರ ಗುಂಪು ಬಟ್ಟೆ ಬಿಚ್ಚಿ ಅಸಭ್ಯ ವರ್ತಿಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಹೊರ ರಾಜ್ಯದ ಹುಡುಗರು ಚಾಮುಂಡಿ ಬೆಟ್ಟದ ಮೆಟ್ಟಿಲಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕಂಡ ಸಾರ್ವಜನಿಕರು ದೂರು ನೀಡಿದ ಮೇರೆಗೆ,ಚಾಮುಂಡಿ ಬೆಟ್ಟದ OP ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಇವರನ್ನು ಠಾಣೆಗೆ ಕರೆತಂದು ತಿಳುವಳಿಕೆ ನೀಡಿ, ಇವರುಗಳ ಮೇಲೆ ಲಘು ಪ್ರಕರಣ ದಾಖಲಿಸಿರುತ್ತಾರೆ. pic.twitter.com/OZmJ89RFWG
— Commissioner of Police Mysuru (@CPMysuru) April 22, 2025
ಯುವಕರು ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದರಿಂದ ಬೇಸತ್ತ ಜನ, ಫೋಟೋ ಸಮೇತ ಪೊಲೀಸರಿಗೆ ದೂರು ನಿಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸದಂತೆ ಯುವಕರಿಗೆ ಪೊಲೀಸರು ತಿಳುವಳಿಕೆ ಹೇಳಿದ್ದಾರೆ. ಅಲ್ಲದೇ ಮುಚ್ಚಳಿಕೆ ಪತ್ರ ಬರೆಸಿಕೊಂಡ ಠಾಣೆಯಿಂದ ಕಳುಹಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಪೋಸ್ಟ್ ಹಂಚಿಕೊಂಡಿದ್ದಾರೆ.