ಬೆಂಗಳೂರು: ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ. ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮೋದಿಯವರು ತಮ್ಮ ಈ ಅವಧಿಯ ಕೊನೆಯ ಭಾಷಣ ಮಾಡಲಿದ್ದು, ಈ ವೇಳೆ ದೇಶದ ಜನತೆಗೆ ಆರೋಗ್ಯ ಕೊಡುಗೆಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ.
ದೇಶದ 50 ಕೋಟಿ ಜನರಿಗೆ ಆರೋಗ್ಯ ವಿಮೆ ಕಲ್ಪಿಸುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸುವ ಸಾಧ್ಯತೆಯಿದೆ. ಅಲ್ಲದೆ ತಮ್ಮ ಭಾಷಣಕ್ಕೆ ದೇಶದ ನಾಗರಿಕೂ ಸಲಹೆಗಳನ್ನು ನೀಡುವಂತೆ ಪ್ರಧಾನಿ ಮೋದಿ ಕರೆ ನೀಡಿದರು. ಅದರಂತೆ ಒಟ್ಟು 30 ಸಾವಿರ ಸಲಹೆಗಳು ಬಂದಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ.
Advertisement
‘ಆಯುಷ್ಮಾನ್ ಭಾರತ್’ ಯೋಜನೆ ವಿಶೇಷ
Advertisement
* ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ
* ವಿಶ್ವದ ಅತಿದೊಡ್ಡ ವೈದ್ಯಕೀಯ ಯೋಜನೆ
* ಕುಟುಂಬವೊಂದಕ್ಕೆ ರೂ.5 ಲಕ್ಷ ಮೌಲ್ಯದ ಆರೋಗ್ಯ ವಿಮೆ
* ವಾರ್ಷಿಕವಾಗಿ 5 ಲಕ್ಷದವರೆಗೆ ಆಸ್ಪತ್ರೆ ಖರ್ಚು
* ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆ ಜಾರಿ
* ಮೊದಲ ಹಂತದಲ್ಲಿ ಛತ್ತೀಸ್‍ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯ, ದಮನ್ ಮತ್ತು ದಿಯುನಲ್ಲಿ ಜಾರಿ
Advertisement
* 11 ರಾಜ್ಯಗಳ 70-80 ಜಿಲ್ಲೆಗಳಲ್ಲಿ ಜಾರಿ
* ಯೋಜನೆಯಲ್ಲಿ 100 ಆಸ್ಪತ್ರೆಗಳಿರುತ್ತವೆ.
* ಮೊದಲಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಸಿಗುತ್ತದೆ
* ಈ ಯೋಜನೆಗೆ ಆಧಾರ್ ಕಾರ್ಡ್ ಕಡ್ಡಾಯ ಅಲ್ಲ
* ಯೋಜನೆಯ ಸೌಲಭ್ಯಕ್ಕಾಗಿ ಪಡಿತರ ಚೀಟಿ ಇದ್ದರೆ ಸಾಕು
* ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಚೀಟಿ ಇದ್ದರೂ ಸಾಕು
* ಕುಟುಂಬದ ಗಾತ್ರ ಮತ್ತು ವಯಸ್ಸಿಗೆ ಯಾವುದೇ ಮಿತಿ ಹೇರಿಲ್ಲ
* ವಿಮೆ ಪಡೆದ ದಿನದಿಂದಲೇ ಎಲ್ಲಾ ಪೂರ್ವ ನಿರ್ಧಾರಿತ ಕಾಯಿಲೆಗಳಿಗೂ ಚಿಕಿತ್ಸೆ
* ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣ ಭತ್ಯೆಯೂ ಒಳಗೊಂಡಿದೆ
* ಖಾಸಗಿ ಅಥವಾ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಸೇವೆ
Advertisement