ಗಾಂಧೀನಗರ: ಇತ್ತೀಚೆಗಷ್ಟೇ 100ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಅವರು, ಗುಜರಾತ್‍ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಪುಟ್ಟ ಮಕ್ಕಳಿಗೆ ರಾಷ್ಟ್ರಧ್ವಜವನ್ನು ಹಂಚಿದರು.
ಶನಿವಾರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಮಕ್ಕಳ ವಿಶ್ವವಿದ್ಯಾಲಯದಲ್ಲಿ 100 ಅಡಿ ಎತ್ತರದ ಧ್ವಜ ಕಂಬದ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮೂರು ದಿನಗಳ ನಡೆಯುತ್ತಿರುವ ಹರ್‌ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ರಶ್ದಿ ಆರೋಗ್ಯದಲ್ಲಿ ಚೇತರಿಕೆ – ವೆಂಟಿಲೇಟರ್‌ನಿಂದ ಬಿಡುಗಡೆ
ಈ ಅಭಿಯಾನದ ಅಡಿಯಲ್ಲಿ ಹೀರಾಬಾ ಅವರು ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿದರು ಮತ್ತು ಅವರೊಂದಿಗೆ ತಾವು ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿದರು ಸಂತಸಪಟ್ಟರು. ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಹೀರಾಬಾ ಅವರು ವಾಸಿಸುತ್ತಿದ್ದಾರೆ.
ಗುಜರಾತ್‍ನ ವಿವಿಧ ಭಾಗಗಳಲ್ಲಿ ತಿರಂಗ ಯಾತ್ರೆ ಆಯೋಜಿಸಲಾಗಿದ್ದು, ಬಿಜೆಪಿ ಶಾಸಕರು ಮತ್ತು ಸಚಿವರು ತ್ರಿವರ್ಣ ಧ್ವಜವನ್ನು ಹಿಡಿದು ಸಾರ್ವಜನಿಕರೊಂದಿಗೆ ರ್‍ಯಾಲಿಗಳೊಂದಿಗೆ ಭಾಗವಹಿಸಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆಜಿಗಟ್ಟಲೆ ಚಿನ್ನ ಹೊತ್ತೊಯ್ದರು
ಇದಕ್ಕೂ ಮುನ್ನ ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಮೆಹಸಾನಾ ಜಿಲ್ಲೆಯ ವಿಜಾಪುರದಲ್ಲಿ ನಡೆದ ಏಳು ಕಿ.ಮೀ. ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರು ಉಪಸ್ಥಿತರಿದ್ದರು.