ನೀರಿನ ಆಳದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ

Public TV
1 Min Read
indian coast guard

ಚೆನ್ನೈ: ದೇಶವು 77ನೇ ಸ್ವಾತಂತ್ರ್ಯ ದಿನಾಚರಣೆಯ (Independence Day 2023) ಸಡಗರದಲ್ಲಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ನೀರಿನೊಳಗೆ ರಾಷ್ಟ್ರಧ್ವಜಾರೋಹಣ ಮಾಡಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿಶೇಷ ಗೌರವ ಸಲ್ಲಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ (Indian Coast Guard), ನೀರಿನ ಒಳಗೆ ರಾಷ್ಟ್ರಧ್ವಜವನ್ನು ಹಾರಿಸುವ ದೃಶ್ಯದ ವೀಡಿಯೋವನ್ನು ಹಂಚಿಕೊಂಡಿದೆ. ಇದಕ್ಕೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದರೆ, ಮತ್ತೊಂದಷ್ಟು ಮಂದಿ ಪ್ರತಿಯಾಗಿ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ

ಈ ವೀಡಿಯೋ ಪೋಸ್ಟ್ ಮಾಡಿದ ಕೇವಲ ಒಂದು ಗಂಟೆಯಲ್ಲಿ ಸುಮಾರು 37,000 ವೀಕ್ಷಿಸಿದ್ದಾರೆ. 2,700 ಕ್ಕೂ ಹೆಚ್ಚು ಲೈಕ್‌ಗಳು ಬಂದಿದ್ದರು. ಅನೇಕರು ವೀಡಿಯೋಗೆ ಬಗೆಬಗೆಯ ಕಾಮೆಂಟ್‌ ಕೂಡ ಮಾಡಿದ್ದಾರೆ.

‘ಇದು ನಮಗೆ ಹೆಮ್ಮೆಯ ಕ್ಷಣ’.. ‘ಜೈ ಹಿಂದ್’..‌ ‘ನಮ್ಮ ಸೇನೆ ಮತ್ತು ರಾಷ್ಟ್ರದ ಬಗೆಗೆ ಹೆಮ್ಮೆ ಇದೆ’.. ‘ಭಾರತ್‌ ಮತಾ ಕಿ ಜೈ’ ಹೀಗೆ ಹಲವಾರು ಕಾಮೆಂಟ್‌ಗಳು ಬಂದಿವೆ.

ದೆಹಲಿಯ ಕೆಂಪು ಕೋಟೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧ್ವಜಾರೋಹಣ ನೆರವೇರಿಸಿದರು. ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿ, ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಮುಂದಿನ ವರ್ಷ ಸಿಗೋಣ; ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ

Web Stories

Share This Article