ಗದಗ: ಸ್ವಾತಂತ್ರ್ಯ ದಿನಾಚರಣೆ (Independence Day) ವೇಳೆ ಸಾರಿಗೆ ಇಲಾಖೆ ಸಿಬ್ಬಂದಿ ಎಡವಟ್ಟು ಮಾಡಿರುವ ಘಟನೆ ಗದಗ (Gadag) ನಗರದ ಸಾರಿಗೆ ವಿಭಾಗೀಯ ಕಚೇರಿ ಬಳಿ ನಡೆದಿದೆ.
ಕೆಎಸ್‌ಆರ್‌ಟಿಸಿ (KSRTC) ಡಿಸಿ ಶೀನಯ್ಯ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವೇಳೆ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರ ಫೋಟೋ ಇಡದ್ದಕ್ಕೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇದನ್ನೂ ಓದಿ: ಪರೇಡ್ ವೇಳೆ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು
ಧ್ವಜಾರೋಹಣ ವೇಳೆ ಅಂಬೇಡ್ಕರ್ ಫೋಟೋ ಇಡದೇ ಕೇವಲ ಮಹಾತ್ಮ ಗಾಂಧೀಜಿ ಅವರ ಫೋಟೋ ಇಟ್ಟು ಸ್ವಾಂತಂತ್ರ್ಯ ದಿನಾಚರಣೆ ಮಾಡಲಾಗಿದೆ. ಇದರಿಂದ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದೀರಿ ಎಂದು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲಾ ಸಾರಿಗೆ ವಿಭಾಗೀಯ ಕಚೇರಿ ಮುಂದೆ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಕಾಂಗ್ರೆಸ್ ಚಿಹ್ನೆ ಫ್ಲೆಕ್ಸ್ – ನಲಪಾಡ್ ಧ್ವಜಾರೋಹಣ
Web Stories