ನವದೆಹಲಿ: ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ ಸಜ್ಜಾಗಿದೆ. ಆದರೆ ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನವೇ ದಾಳಿ ನಡೆಸುವುದಾಗಿ ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭಾರೀ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
Advertisement
ದೆಹಲಿಯ ಮಧ್ಯಭಾಗದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಾದ್ಯಂತ ಅಣುಕು ಪ್ರದರ್ಶನ ಮಾಡಲಾಗಿದ್ದು, ಜನಸಂದಣಿ ಹಾಗೂ ಸೂಕ್ಷ್ಮವಲಯಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದಯವಿಟ್ಟು ರಜೆ ಕೊಡಬೇಡಿ: ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿ ಮನವಿ
Advertisement
ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕಾಗಿ ದೆಹಲಿಯ ಕೆಂಪುಕೋಟೆ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಈ ಬಾರಿ 75ನೇ ಅಮೃತ ಮಹೋತ್ಸವ ಆಗಿರುವುದರಿಂದ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದೆ. ಕೇಂದ್ರದ ಏಜೆನ್ಸಿ ಹಾಗೂ ಗುಪ್ತಚರ ಇಲಾಖೆಗಳೊಂದಿಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲಾಗುತ್ತದೆ. ಕೆಂಪುಕೋಟೆ ಹಾಗೂ ಸಮೀಪದ ಪ್ರದೇಶಗಳಲ್ಲಿ ನಿಗಾ ಇಡಲು 400 ಕಿಟ್ ಫ್ಲೈಯರ್ಸ್ (ಗಾಳಿಪಟ ಹಾರಾಟಗಾರರು)ಗಳನ್ನು ನಿಯೋಜಿಸಲಾಗಿದೆ. ಗಾಳಿಪಟ, ಡ್ರೋನ್ ಹಾಗೂ ಮೊದಲಾದ ಹಾರುವ ವಸ್ತುಗಳು ಕಾಣಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ 50 ಪೆಟ್ರೋಲ್ ಬಂಕ್ ತೆರೆಯಲಿದೆ ಐಒಸಿ
1 ಸಾವಿರಕ್ಕೂ ಹೈ ಸ್ಪೆಸಿಫಿಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈ ಕ್ಯಾಮೆರಾಗಳು ಕೆಂಪುಕೋಟೆಗೆ ಹೋಗುವ ವಿಐಪಿ ಮಾರ್ಗಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.