ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಉಲ್ಟ ಧ್ವಜ ಹಾರಿಸಿದ್ದಾರೆ.
ಧ್ವಜ ಹಾರಿದ ನಂತರವೇ ಪ್ರಮಾದ ಬೆಳಕಿಗೆ ಬಂದಿದ್ದು, ತಕ್ಷಣ ಧ್ವಜ ಕೆಳಗಿಳಿಸಿ ಸರಿ ಪಡಿಸಿ ಮತ್ತೆ ಹಾರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ ಇನ್ನಿತರರು ಉಪಸ್ಥಿತರಿದ್ದರು.
Advertisement
ರಾಷ್ಟ್ರೀಯ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಆಗಿರುವ ಈ ಪ್ರಮಾದಕ್ಕೆ ಸಾಮಾಜಿಕ ಮಾಧ್ಯಮ ಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಗೋಡು ತಿಮ್ಮಪ್ಪ, ಹಾಗೇನೂ ಆಗಿಲ್ಲ. ಸ್ವಲ್ಪ ವ್ಯತ್ಯಾಸ ಆಗಿತ್ತು ಸರಿ ಮಾಡಿದ್ದೇವೆ. ನಮ್ಮ ಪಕ್ಷದವರೇ ಈ ವಿಷಯ ಬಹಿರಂಗ ಮಾಡಿದ್ದಾರೆ ಎಂದು ಅಸಮಾಧಾನ ತೋರಿದರು.