ಮಂಗಳೂರು: ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನದ ವೇಳೆ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಶಾಲಾ ಮುಖ್ಯೋಪಾಧ್ಯಾಯರನ್ನು ಕರೆಸಿ ಬಹಿರಂಗ ಕ್ಷಮಾಪಣೆ ಹೇಳಿಸಿದ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ನಡೆದಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ
Advertisement
Advertisement
ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಆಡಳಿತರೂಢ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ ಮುಖ್ಯೋಪಾಧ್ಯಾಯರನ್ನು ಪಂಚಾಯತ್ ಸದಸ್ಯರು ಕರೆಸಿ ಬಹಿರಂಗ ಕ್ಷಮಾಪಣೆ ಹೇಳಿಸಿದ್ದಾರೆ.