ಹೈದರಾಬಾದ್: ಸಾಂಗ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದ ವಿಶಾಲ್ ಪಾಟೀಲ್ (Vishal Patil) ಅವರು ಗುರುವಾರ ಕಾಂಗ್ರೆಸ್‌ಗೆ (Congress) ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ‘ಇಂಡಿಯಾ’ ಮೈತ್ರಿಕೂಟದ (INDIA Bloc) ಸಂಖ್ಯೆ 233 ಕ್ಕೆ ಏರಿಕೆಯಾಗಿದೆ.
ಪಾಟೀಲ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಒಂದು ಕ್ಷೇತ್ರದ ಸೋಲು – ಮತ್ತೆ ಎನ್‌ಡಿಎಗೆ ಸೇರ್ತಾರಾ ಉದ್ಧವ್?
Advertisement
Advertisement
ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವುದನ್ನು ಸ್ವಾಗತಿಸುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.
Advertisement
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದವು. ಸಾಂಗ್ಲಿಯಲ್ಲಿ ಉದ್ಧವ್ ಠಾಕ್ರೆ ಅವರ ಪಕ್ಷದಿಂದ ಚಂದ್ರಹರ ಸುಭಾಶ್ ಪಾಟೀಲ್ ಕಣಕ್ಕೆ ಇಳಿದಿದ್ದರು. ಆದರೆ ಫಲಿತಾಂಶ ಪ್ರಕಟವಾದಾಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ವಿಶಾಲ್ ಪ್ರಕಾಶ್‌ಬಾಪು ಪಟೀಲ್ 1,00,053 ಮತಗಳ ಅಂತರದಿಂದ ಜಯಗಳಿಸಿದ್ದರು. ಇದನ್ನೂ ಓದಿ: ಜೂ.9 ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಮೂಲ
Advertisement
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶಾಲ್ ಪ್ರಕಾಶ್ ಪಾಟೀಲ್ ಅವರು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದ್ದರು. ಆದರೆ ಮೈತ್ರಿ ಭಾಗವಾಗಿರುವ ಕಾರಣ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಆದರೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಹಿಂದುಗಡೆಯಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ್ದಕ್ಕೆ ಉದ್ಧವ್ ಠಾಕ್ರೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬುಧವಾರ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಠಾಕ್ರೆ ಗೈರಾಗಿದ್ದರು.