ರಾಜೀನಾಮೆ ಸಲ್ಲಿಸಿದ ಬಳಿಕ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ನಿಷ್ಠೆ, ಪ್ರಾಮಾಣಿಕತೆಗೆ ಬೆಲೆಯಿಲ್ಲ. 2023ರ ಪೂರ್ವದಲ್ಲೇ ನನಗೆ ಕರೆದು ಭರವಸೆ ಕೊಟ್ಟಿದ್ದರು. ಈಗ ನಾನು ಬಿಟ್ಟು ಹೋಗ್ತಿಲ್ಲ, ಅವರೇ ನನ್ನನ್ನು ಬಿಟ್ಟಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.ಇದನ್ನೂ ಓದಿ: Karnataka Cabinet Expansion Live Update| ಲೋಕಭವನಕ್ಕೆ ತಲುಪದ ಹೊಸ ಪಟ್ಟಿ
ಕಳೆದ ಬಾರಿಯೇ ನಿಗಮ ಮಂಡಳಿ ಕೊಡ್ತೀವಿ ಅಂದಿದ್ದರು. ಆದರೆ ನಾನು ಬೇಡ ಅಂದಿದ್ದೆ. ಸ್ವಾತಂತ್ರ‍್ಯದ ನಂತರ ಇದುವರೆಗೂ ಇಂಡಿ ಕ್ಷೇತ್ರದವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ನಾನು ರಾಜೀನಾಮೆ ಕೊಟ್ಟಿದ್ದೀನಿ, ಅದನ್ನ ಅಂಗೀಕಾರ ಮಾಡಬೇಕು. ಯಾವುದೇ ಕಾರಣಕ್ಕೂ ನಾನು ವಾಪಸ್ ಪಡೆಯಲ್ಲ. ಯಾವುದೇ ಕಾರಣಕ್ಕೂ ನಾನು ಶಾಸಕನಾಗಿ ಮುಂದುವರೆಯಲ್ಲ. ಜಿಲ್ಲೆಯ ರಾಜಕಾರಣ ಬೀದಿಗೆ ಬಂದಿದೆ ಎಂದು ಎಂ.ಬಿ ಪಾಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮೂರು ಬಾರಿ ಶಾಸಕರಾಗಿರುವ ಹಿರಿಯ ಶಾಸಕರಿಗೆ ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಂಪುಟ ವಿಸ್ತರಣೆ – ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು
