– 2ನೇ ದಿನ ಯಶಸ್ವಿ ಏಕಾಂಗಿ ಹೋರಾಟ, ಇನ್ನಿಂಗ್ಸ್ ಕಟ್ಟುವ ಪ್ರಯತ್ನದಲ್ಲಿ ಜುರೆಲ್, ಕುಲ್ದೀಪ್
ರಾಂಚಿ: ಭಾರತ ಹಾಗೂ ಇಂಗ್ಲೆಂಡ್ (Ind vs Eng) ನಡುವಿನ 4ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಕ್ತಾಯಗೊಂಡಿದ್ದು, ಇಂಗ್ಲೆಂಡ್ 134 ರನ್‌ಗಳ ಮುನ್ನಡೆ ಸಾಧಿಸಿದೆ. ಇನ್ನು ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 73 ಓವರ್‌ಗಳಲ್ಲಿ 219 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (Yashasvi Jaiswal) ಹೊರತುಪಡಿಸಿದ್ರೆ ಉಳಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ವಿಕೆಟ್ ಕೈಚೆಲ್ಲಿದ ಕಾರಣ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್‌ನಲ್ಲಿರುವ ಧ್ರುವ್ ಜುರೆಲ್ (Dhruv Jurel) ಮತ್ತು ಕುಲ್ದೀಪ್ ಯಾದವ್ (Kuldeep Yadav) ಇನ್ನಿಂಗ್ಸ್ ಕಟ್ಟುವ ಪ್ರಯತ್ನದಲ್ಲಿದ್ದಾರೆ. ಇದನ್ನೂ ಓದಿ: ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್ ಕದನ!
ಶನಿವಾರ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 73 ರನ್ (117 ಎಸೆತ, 8 ಬೌಂಡರಿ, 1 ಸಿಕ್ಸರ್) ಗಳಿಸುವ ಮೂಲಕ ತಂಡವನ್ನು ಮೇಲೆತ್ತಲು ಪ್ರಯತ್ನಿಸಿದ್ದರು. ಆದ್ರೆ ಶೋಯೆಬ್ ಪಶೀರ್ ಸ್ಪಿನ್ ದಾಳಿಗೆ ತುತ್ತಾಗಿ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ರೋಹಿತ್ ಶರ್ಮಾ 2 ರನ್, ಶುಭಮನ್ ಗಿಲ್ 38 ರನ್, ರಜತ್ ಪಾಟೀದಾರ್ 17 ರನ್, ರವೀಂದ್ರ ಜಡೇಜಾ 12 ರನ್ ಮತ್ತು ಸರ್ಫರಾಜ್ ಖಾನ್ 14 ರನ್ ಗಳಿಸಿದ್ರೆ ರವಿಚಂದ್ರನ್ ಅಶ್ವಿನ್ 1 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಸದ್ಯ ಧ್ರುವ್ ಜುರೆಲ್ 30 ರನ್ ಮತ್ತು ಕುಲ್ದೀಪ್ ಯಾದವ್ 17 ರನ್ ಗಳಿಸಿ ಕ್ರೀಸ್‌ನಲ್ಲಿದ್ದು, ಭಾನುವಾರ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಇನ್ನೂ ಇಂಗ್ಲೆಂಡ್ ಪರ ಸ್ಪಿನ್ ದಾಳಿ ನಡೆಸಿದ ಶೋಯೆಬ್ ಬಶೀರ್ 4 ವಿಕೆಟ್ ಕಿತ್ತರೆ, ಟಾಮ್ ಹಾರ್ಟ್ಲೀ 2 ವಿಕೆಟ್, ಜೇಮ್ಸ್ ಆ್ಯಂಡರ್ಸನ್ 1 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಟೀಂ ಇಂಡಿಯಾ ವಿರುದ್ಧ ಶತಕ – ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ರೂಟ್!
ಇದಕ್ಕೂ ಮುನ್ನ ಶನಿವಾರ ಬೆಳಗ್ಗೆ 302 ರನ್‌ಗಳಿಂದ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ, 104.5 ಓವರ್‌ಗಳಿಗೆ 353 ರನ್‌ಗಳಿಗೆ ಆಲ್‌ಔಟ್ ಆಯಿತು. 2ನೇ ದಿನ ಆಂಗ್ಲರು ಕೇವಲ 51 ರನ್‌ಗಳನ್ನುಗಳಿಗೆ ಸೀಮಿತರಾದರು. ಜೋ ರೂಟ್ 122 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊನೆಯಲ್ಲಿ ಓಲ್ಲೀ ರಾಬಿನ್ಸನ್ 58 ರನ್ ಗಳಿಸಿದರು. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತರೆ, ಆಕಾಶ್ ದೀಪ್ 3 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್ 2 ವಿಕೆಟ್ ಹಾಗೂ ಅಶ್ವಿನ್ 1 ವಿಕೆಟ್ ಕಿತ್ತರು.
ಶುಕ್ರವಾರ ಆರಂಭವಾಗಿದ್ದ 4ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ, 112 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ರೂಟ್ ಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇದು ತಮ್ಮ ಟೆಸ್ಟ್ ವೃತ್ತಿ ಜೀವನದ 31ನೇ ಶತಕವೂ ಆಗಿದೆ.