– 2035ಕ್ಕೆ ಭಾರತೀಯ ಅಂತರಿಕ್ಷಾ ನಿಲ್ದಾಣ ಸ್ಥಾಪನೆ ಗುರಿ
– ಪ್ರಧಾನಿ ಮೋದಿ ನೇತೃತ್ವದಲ್ಲಿ ಇಸ್ರೋ ವಿಜ್ಞಾನಿಗಳ ಸಭೆ
ನವದೆಹಲಿ: ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮಿಷನ್ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ
2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3ರ ಬಳಿಕ ಇಸ್ರೋ ತಂತ್ರಜ್ಞಾನ ಬಯಸಿದ ನಾಸಾ: ಸೋಮನಾಥ್
Web Stories