ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

Public TV
1 Min Read
donald trump

ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನ (India Pakistan Tension) ಪೂರ್ಣ & ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ.

ಅಮೆರಿಕದ ಮಧ್ಯಸ್ಥಿಕೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿಕೊಂಡ ಟ್ರಂಪ್, ಬಿಕ್ಕಟ್ಟನ್ನು ಶಮನಗೊಳಿಸಲು ‘ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ’ಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಭಾರತ್ ಫೋರ್ಜ್, ಮಹೀಂದ್ರಾ ಕಂಪನಿಗಳಿಗೆ ಯುದ್ಧ ಸಾಮಗ್ರಿ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸೂಚನೆ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಡೊನಾಲ್ಡ್‌ ಟ್ರಂಪ್‌, ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂಬ ಟ್ರಂಪ್ ಹೇಳಿಕೆಯನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಕೂಡ ಅನುಮೋದಿಸಿದ್ದಾರೆ. ಇದನ್ನೂ ಓದಿ: ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಬಾಗೇಪಲ್ಲಿ ಗಡಿಯ ಯೋಧ ಹುತಾತ್ಮ- ಕಂಬನಿ ಮಿಡಿದ ಕರುನಾಡು

ಆದರೆ, ಕದನ ವಿರಾಮದ ಬಗ್ಗೆ ಭಾರತದಿಂದ ಈವರೆಗೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

Share This Article