ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ(Pahalgam Terror Attack) ಭಾರತದ ಪ್ರತೀಕಾರ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಭಾರತ- ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಗಡಿ ಭದ್ರತಾ ಪಡೆ(BSF) ಸೇರಿದಂತೆ ದೇಶದ ಗಡಿ ಕಾವಲು ಪಡೆಗಳ ಮುಖ್ಯಸ್ಥರೊಂದಿಗೆ ಗುರುವಾರ ತಡರಾತ್ರಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತ ನಡೆಸಿದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನವು(Pakistan) ಬುಧವಾರ ಜಮ್ಮು ಸೇರಿ ಅನೇಕ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ಮುಂದಾಗಿತ್ತು. ಆದರೆ ಭಾರತ ಪಾಕ್‌ನ ಡ್ರೋನ್ ಹಾಗೂ ಕ್ಷಿಪಣಿಗಳನ್ನು ಹೊಡೆದುರುಳಿಸುವ ಮೂಲಕ ದಿಟ್ಟ ಉತ್ತರ ನೀಡಿದೆ. ಇದನ್ನೂ ಓದಿ: ಕ್ವೆಟ್ಟಾದಿಂದ ಪಾಕ್ ಸೇನೆ ಪಲಾಯನ – ಸೇನಾ ಠಾಣೆಗಳನ್ನ ವಶಕ್ಕೆ ಪಡೆದ ಬಲೂಚ್ ಹೋರಾಟಗಾರರು
ಭಾರತ-ಪಾಕ್ ಗಡಿ ಪ್ರದೇಶಗಳಲ್ಲಿ ಜನರ ಸುರಕ್ಷತೆ ಹಾಗೂ ಭದ್ರತೆ ಸೇರಿ ಇತರೆ ವಿಷಯಗಳ ಬಗ್ಗೆ ಅಮಿತ್ ಶಾ ಚರ್ಚೆ ನಡೆಸಿದರು. ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುಲು ಬಿಎಸ್‌ಎಫ್, ಐಟಿಬಿಪಿ, ಎಎಸ್‌ಬಿ ಭದ್ರತಾ ಪಡೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಹೈಅಲರ್ಟ್ – ದೇಶಾದ್ಯಂತ 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಬಂದ್
ಈ ವೇಳೆ ಗಡಿ ಭದ್ರತಾ ಪಡೆಗಳ ಮುಖ್ಯಸ್ಥರು ಗಡಿ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಕ್ರಮ ಸೇರಿದಂತೆ ಪ್ರಮುಖ ವಿಚಾರಗಳನ್ನು ಗೃಹಸಚಿವರ ಗಮನಕ್ಕೆ ತಂದರು. ದೇಶದ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಸಿಐಎಸ್‌ಎಫ್ ಮುಖ್ಯಸ್ಥರಿಂದ ಅಮಿತ್ ಶಾ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮನೆ ಬಳಿಯೇ ಮಿಸೈಲ್ ದಾಳಿ – ಬಂಕರ್‌ನಲ್ಲಿ ಅಡಗಿ ಕುಳಿತ ಪಾಕ್ ಪ್ರಧಾನಿ
ಏ. 22 ರಂದು ಕಾಶ್ಮೀರದ(Kashmir) ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕ್ ಉಗ್ರರ 9 ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು. ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಮೇಲೆ ದಾಳಿ ನಡೆಸಿದ್ದು, ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿದೆ.