– ಭಯೋತ್ಪಾದನೆ ವಿರುದ್ಧ ಮಾತ್ರ ಭಾರತ ಎಂದೂ ರಾಜಿಯಾಗಲ್ಲ: ಸ್ಪಷ್ಟಪಡಿಸಿದ ವಿದೇಶಾಂಗ ಸಚಿವ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ (S.Jaishankar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ
India and Pakistan have today worked out an understanding on stoppage of firing and military action.
India has consistently maintained a firm and uncompromising stance against terrorism in all its forms and manifestations. It will continue to do so.
— Dr. S. Jaishankar (@DrSJaishankar) May 10, 2025
ಭಾರತ ಮತ್ತು ಪಾಕ್ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.
ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್ ಟ್ರಂಪ್ ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದರು. ಅದರ ಬೆನ್ನಲ್ಲೇ ಎರಡೂ ದೇಶಗಳು ಅಧಿಕೃತವಾಗಿ ಕದನ ವಿರಾಮದ ಬಗ್ಗೆ ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ