Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ; ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂದು ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ; ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

Cricket

ಇಂದು ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ; ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

Public TV
Last updated: June 29, 2024 8:21 am
Public TV
Share
2 Min Read
T20 world cup india and south africa
SHARE

– ದಶಕದ ಬಳಿಕ ಮುಡಿಗೇರುತ್ತಾ ವಿಶ್ವಕಪ್ ಕಿರೀಟ

ಬಾರ್ಬಡೋಸ್: ಚುಟುಕ ಮಾದರಿಯ ಕ್ರಿಕೆಟ್ ವಿಶ್ವಕಪ್ ಫೈನಲ್ (T20 World Cup Final) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ದಕ್ಷಿಣ ಆಫ್ರಿಕಾ (South Africa) ಮತ್ತು ಭಾರತ (India) ತಂಡಗಳು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿದೆ. 11 ವರ್ಷಗಳ ಹಿಂದೆ ಫೈನಲ್‌ನಲ್ಲಿ ಮುಗ್ಗರಿಸಿದ್ದ ಭಾರತ ತಂಡ ಇದೀಗ ಫೈನಲ್ ತಲುಪಿದ್ದು, ಟ್ರೋಫಿ ಮುಡಿಗೇರಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಭಾರತದ ಕೋಟ್ಯಂತರ ಅಭಿಮಾನಿಗಳು ‘ಗೆದ್ದು ಬಾ ಟೀಂ ಇಂಡಿಯಾ’ ಎಂದು ಆಶಿಸುತ್ತಿದ್ದಾರೆ.

10 ವರ್ಷಗಳ ಹಿಂದೆ ಫೈನಲ್‌ನಲ್ಲಿ ಮುಗ್ಗರಿಸಿದ್ದ ಟೀಂ ಇಂಡಿಯಾ, ಈ ಬಾರಿ ಎಚ್ಚರಿಕೆ ಆಟವಾಡಲು ಕಠಿಣ ತಾಲೀಮು ನಡೆಸಿದೆ. ಹರಿಣರನ್ನು ಅಷ್ಟು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಯಾಕೆಂದರೆ, ಹೊಡಿಬಡಿ ಆಟಗಾರರ ದಂಡೇ ಇದೆ. ಸ್ವಲ್ಪ ಯಾಮಾರಿದರೂ ಭಾರತಕ್ಕೆ ಮತ್ತೆ ವನವಾಸ ತಪ್ಪಿದ್ದಲ್ಲ ಎನ್ನವಂತಿದೆ. ಇದನ್ನೂ ಓದಿ: ಶಫಾಲಿ ವರ್ಮಾ ಸ್ಫೋಟಕ ದ್ವಿಶತಕ – ಮೊದಲ ದಿನವೇ 3 ವಿಶ್ವದಾಖಲೆ ಬರೆದ ಭಾರತ

team india world cup

ಇಂದು ರಾತ್ರಿ 8 ಗಂಟೆಗೆ ಬ್ರಿಡ್ಜ್‌ಟೌನ್‌ನ ಕೆನ್ಸಿಲ್‌ಟೌನ್‌ ಓವೆಲ್‌ನಲ್ಲಿ ನಡೆಯಲಿರುವ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾದ ಸೆಣಸಾಡಲಿದೆ. ಟೀಂ ಇಂಡಿಯಾಗೆ ತಲೆನೋವಾಗಿರೋದು ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್ ಬಾರದೇ ಇರೋದು. ರನ್ ಮಷಿನ್ ಕೊಹ್ಲಿ, ಬ್ಯಾಟ್ ಸಿಡಿಯುತ್ತಿಲ್ಲ. ಸತತ ವೈಫಲ್ಯ ಕೊಹ್ಲಿಯನ್ನೇ ಕುಗ್ಗುವಂತೆ ಮಾಡಿದೆ. ಇದು ಟೀಂ ಇಂಡಿಯಾದ ಮೇಲೂ ಪರಿಣಾಮ ಬೀರಿದೆ. ಕಾರಣ, ಭಾರತ ಉತ್ತಮ ಆರಂಭ ಪಡೆದುಕೊಳ್ಳದೆ ಇರುವುದು.

south africa T20 world cup

ತಂಡದ ನಾಯಕ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ರನ್ ಬರವನ್ನ ನೀಗಿಸುತ್ತಿದ್ದಾರೆ. ಎದುರಾಳಿಗಳನ್ನ ಚಂಡಾಡುತ್ತಿರುವ ರೋಹಿತ್, ಇಂದಿನ ಪಂದ್ಯದಲ್ಲೂ ಅಬ್ಬರಿಸುವ ತವಕದಲ್ಲಿದ್ದಾರೆ. ಇತ್ತ, ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್,‌ ರಿಷಭ್‌ ಪಂತ್, ಪಾಂಡ್ಯ, ಶಿವಂ ದುಬೆ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ನೆರವಾಗುತ್ತಿದ್ದಾರೆ. ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಬೌಲಿಂಗ್ ಜಾದು ಹರಿಣರಿಗೆ ಸವಾಲಾಗಿ ಕಂಡಿದ್ದಾರೆ. ಅರ್ಷದೀಪ್‌ಸಿಂಗ್, ಬೂಮ್ರಾ ಎದುರಾಳಿಗಳ ನಿದ್ದೆಗೆಡಿಸಿದ್ದಾರೆ. ಇದನ್ನೂ ಓದಿ: ಗೆದ್ದು ಬಾ ಟೀಂ ಇಂಡಿಯಾ – 2014 ರಿಂದ 2023ವರೆಗೆ ಐಸಿಸಿ ಟೂರ್ನಿಯಲ್ಲಿ ಭಾರತ ಸಾಧನೆ ಏನು?

ಬರೋಬ್ಬರಿ 37 ವರ್ಷಗಳಿಂದ ಚೋಕರ್ಸ್ ಹಣೆಪಟ್ಟಿ ದಕ್ಷಿಣ ಆಫ್ರಿಕಾ ತಂಡಕ್ಕಿದೆ. ಅದು ಎಷ್ಟೋ ಐಸಿಸಿ ಟೂರ್ನಿಗಳಲ್ಲಿ ಅಂತಿಮ ಸುತ್ತಿನ ವರೆಗೆ ಬಂದು ಮುಗ್ಗರಿಸಿದ್ದೇ ಹೆಚ್ಚು. ಸೆಮಿಸ್‌ನಲ್ಲಿ ಸೋತು ನಿರಾಸೆಗೊಳ್ಳುತ್ತಿತ್ತು. ಕೊನೆಗೂ 37 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಫೈನಲ್‌ಗೇರಿರುವ ಮಾರ್ಕ್ರಮ್ ಪಡೆ, ಈ ಬಾರಿ ಶತಾಯಗತಾಯ ಪ್ರಶಸ್ತಿ ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ಕ್ವಿಂಟನ್ ಡಿಕಾಕ್, ಕ್ಲಾಸೆನ್, ಸ್ಟಬ್ಸ್, ಹೆಂಡ್ರಿಕ್ಸ್, ಡೆವಿಡ್ ಮಿಲ್ಲರ್‌ರಂತಹ ಆಟಗಾರರು ಪಂದ್ಯದ ಗತಿಯನ್ನೇ ಬದಲಿಸುವ ತಾಕತ್ತನ್ನು ಹೊಂದಿದ್ದಾರೆ. ಕೇಶವ್ ಮಹರಾಜ್, ರಬಡ, ನಾರ್ಟ್ಜೆ, ತಬ್ರೇಜ್ ಶಮ್ಸಿ ತಂಡದ ಟ್ರಂಪ್‌ಕಾರ್ಡ್.

TAGGED:India vs South AfricaT20 World Cup 2024
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 minutes ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
51 minutes ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
1 hour ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
1 hour ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
1 hour ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?