ಮುಂಬೈ: ಟಿ20 ವಿಶ್ವಕಪ್ (T20 World Cup) ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ (Bangladesh) ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯರನ್ನು (Hardik Pandya) ತಂಡದ ನಾಯಕನನ್ನಾಗಿ ನೇಮಕ ಮಾಡಲಾಗಿದೆ.
Advertisement
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ನೂತನ ನಾಯಕನೊಂದಿಗೆ ಕಣಕ್ಕಿಳಿಯಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸಹಿತ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಉಮ್ರಾನ್ ಮಲಿಕ್‍ಗೆ ಮತ್ತೆ ಮಣೆ ಹಾಕಲಾಗಿದೆ. ಇದನ್ನೂ ಓದಿ: ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ
Advertisement
Advertisement
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್‍ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಗಾಯಾಳುವಾಗಿದ್ದ ದೀಪಕ್ ಚಹರ್‌ರನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ.
Advertisement
ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್. ಇದನ್ನೂ ಓದಿ: ಕತ್ರಿನಾ ಕೈಫ್‌ಗೆ ಬೌಲಿಂಗ್ ಮಾಡಿದ ಹರ್ಭಜನ್ ಸಿಂಗ್
Squad for NZ T20Is:
Hardik Pandya (C), Rishabh Pant (vc & wk), Shubman Gill, Ishan Kishan, Deepak Hooda, Surya Kumar Yadav, Shreyas Iyer, Sanju Samson (wk), W Sundar, Yuzvendra Chahal, Kuldeep Yadav, Arshdeep Singh, Harshal Patel, Mohd. Siraj, Bhuvneshwar Kumar, Umran Malik.
— BCCI (@BCCI) October 31, 2022
ಏಕದಿನ ತಂಡ:
ಶಿಖರ್ ಧವನ್ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶದ ಏಕದಿನ ಮತ್ತು ಟೆಸ್ಟ್ ಸರಣಿಗೆ ಹಿರಿಯ ಆಟಗಾರರನ್ನು ಸೇರಿದ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಖಾಯಂ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಸೇರಿದಂತೆ ಆಲೌರೌಂಡರ್ ರವೀಂದ್ರ ಜಡೇಜಾರನ್ನು ಮತ್ತೆ ಬಿಸಿಸಿಐ (BCCI) ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಯಶ್ ದಯಾಲ್‌ಗೆ ಟೀಂ ಇಂಡಿಯಾ ಪರ ಆಡಲು ಮೊದಲ ಕರೆ ನೀಡಲಾಗಿದೆ. ಇದನ್ನೂ ಓದಿ: ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ
ಏಕದಿನ ಸರಣಿ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.
Squad for Bangladesh ODIs:
Rohit Sharma (C), KL Rahul (vc), Shikhar Dhawan, Virat Kohli, Rajat Patidar, Shreyas Iyer, Rahul Tripathi, Rishabh Pant (wk), Ishan Kishan (wk), Ravindra Jadeja, Axar Patel, W Sundar, Shardul Thakur, Mohd. Shami, Mohd. Siraj, Deepak Chahar, Yash Dayal
— BCCI (@BCCI) October 31, 2022
ಟೆಸ್ಟ್ ಸರಣಿ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಈಗಾಗಲೇ ಗಾಯಾಳುವಾಗಿ ಟಿ20 ವಿಶ್ವಕಪ್ ಸರಣಿಯಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಈ ಎರಡೂ ಸರಣಿಯಿಂದಲೂ ಹೊರಗುಳಿದಿದ್ದಾರೆ.