ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ನಡೆಸಬಹುದಾದ ದಾಳಿ ಬಗ್ಗೆ ಭಾರತ ಭೀತಿ ವ್ಯಕ್ತಪಡಿಸುತ್ತಿದೆ. ಉಕ್ರೇನ್‍ನಲ್ಲಿ ವಿದ್ಯಾಭ್ಯಾಸಕ್ಕೆ ತೆರಳಿರುವ ವಿದ್ಯಾರ್ಥಿಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಉಕ್ರೇನ್ ತೊರೆಯುವಂತೆ ಸಲಹೆ ನೀಡಿದೆ.
ಉಕ್ರೇನ್‍ನ ಭಾರತೀಯ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ. ಉಕ್ರೇನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸದ್ಯದ ಪರಿಸ್ಥಿತಿಯಲ್ಲಿ ಮುಂಜಾಗೃತಾ ಕ್ರಮವಾಗಿ ಉಕ್ರೇನ್ ತೊರೆಯುವುದು ಉತ್ತಮ ಎಂದು ಸಲಹೆ ನೀಡಿದೆ. ಇದನ್ನೂ ಓದಿ: ಉಕ್ರೇನ್ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಭಾರತ ಆತಂಕ
ADVISORY TO INDIAN STUDENTS IN UKRAINE.@MEAIndia @PIB_India @IndianDiplomacy @DDNewslive @PTI_News @IndiainUkraine pic.twitter.com/7pzFndaJpl
— India in Ukraine (@IndiainUkraine) February 22, 2022
ಭಾರತ ರಾಯಭಾರಿ ಕಚೇರಿಗೆ ಈ ವರೆಗೆ ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್‍ಲೈನ್ ತರಗತಿಯ ದೃಢೀಕರಣದ ಬಗ್ಗೆ ಹಲವು ಬಾರಿ ಕರೆಗಳು ಬಂದಿವೆ. ಆದರೆ ವಿದ್ಯಾರ್ಥಿಗಳಿಗೆ ತಮ್ಮ ಸುರಕ್ಷತೆಯ ಹಿತಾಸಕ್ತಿಯಿಂದ ಅಧಿಕೃತ ದೃಢೀಕರಣಕ್ಕೆ ಕಾಯುವ ಬದಲು ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವುದು ಉತ್ತಮ ಎಂದು ಸಲಹೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್ ಇಂಡಿಯಾ ವಿಮಾನ
ಉಕ್ರೇನ್ ಮೇಲೆ ರಷ್ಯಾ ನಡೆಸಬಹುದಾದ ದಾಳಿಯ ಭೀತಿಗೆ ವಿದೇಶೀ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಮಾನಗಳ ಸಂಖ್ಯೆಯನ್ನೂ ಹೆಚ್ಚಿಸಿದೆ. ಉಕ್ರೇನ್‍ನಲ್ಲಿರುವ ಭಾರತೀಯರನ್ನು ಕರೆತರಲು ಮಂಗಳವಾರ ಬೆಳಗ್ಗೆ ಏರ್ ಇಂಡಿಯಾ ವಿಮಾನವೊಂದು ತೆರಳಿದ್ದು, ಇನ್ನಷ್ಟು ವಿಮಾನಗಳನ್ನು ಕಳುಹಿಸುವುದಾಗಿ ತಿಳಿಸಿದೆ.