ನವದೆಹಲಿ: ಪಾಕಿಸ್ತಾನಕ್ಕೆ (Pakistan) ಹೋಗುವ ಮತ್ತು ಬರುವ ಹಡಗುಗಳಿಗೆ ಭಾರತ (India) ಬ್ರೇಕ್ ಹಾಕಿದೆ. ಆ ಮೂಲಕ ಪಾಕ್‌ಗೆ ಜಲಮಾರ್ಗ ಬಂದ್ ಮಾಡಲಾಗಿದೆ.
ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯವು, ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿದೆ. ಇದನ್ನೂ ಓದಿ: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ
ಭಾರತೀಯ ಆಸ್ತಿಗಳು, ಸರಕು ಮತ್ತು ಬಂದರು ಮೂಲಸೌಕರ್ಯಗಳನ್ನು ರಕ್ಷಿಸಲು 1958 ರ ಮರ್ಚೆಂಟ್ ಶಿಪ್ಪಿಂಗ್ ಕಾಯ್ದೆಯ ಸೆಕ್ಷನ್ 411 ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವ ಈ ನಿರ್ಬಂಧಗಳನ್ನು ವಿಧಿಸಲಾಗಿದೆ.
ರಾಷ್ಟ್ರೀಯ ಹಿತಾಸಕ್ತಿಗಳನ್ನು ಪೂರೈಸಲು ಸೂಕ್ತವಾದ ರೀತಿಯಲ್ಲಿ, ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಭಾರತೀಯ ವಾಣಿಜ್ಯ ನೌಕಾಪಡೆಯ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಈ ಕಾಯಿದೆಯ ಉದ್ದೇಶವಾಗಿದೆ ಎಂದು ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಶಂಕರಾಚಾರ್ಯ ಜಯಂತಿ ಆಚರಣೆ
ಭದ್ರತೆಯನ್ನು ಬಲಪಡಿಸುವ ಮತ್ತು ಭಾರತದ ಕಡಲ ಹಿತಾಸಕ್ತಿಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನಗಳ ಭಾಗವಾಗಿ, ಮುಂದಿನ ಸೂಚನೆ ಬರುವವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ.
ಪಾಕಿಸ್ತಾನದ ಧ್ವಜವನ್ನು ಹೊಂದಿರುವ ಹಡಗು ಯಾವುದೇ ಭಾರತೀಯ ಬಂದರಿಗೆ ಪ್ರವೇಶಿಸುವಂತಿಲ್ಲ. ಹಾಗೆಯೇ, ಭಾರತೀಯ ಧ್ವಜವನ್ನು ಹೊಂದಿರುವ ಹಡಗು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಹೋಗುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ: ಬಿಲಾವಲ್ ಭುಟ್ಟೋ