ಮುಂಬೈ: ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ರೋಹಿತ್ ಶರ್ಮಾ (Rohit Sharma) ನಾಯಕನಾಗಿ ಭಾರತದ (Team India) ಪರ ದಾಖಲೆ ಬರೆದಿದ್ದಾರೆ.
ನ್ಯೂಜಿಲೆಂಡ್ (New Zealand) ವಿರುದ್ಧದ ಸೆಮಿಫೈನಲ್ (Semi Final) ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಆರಂಭದಿಂದ ಸೆಮಿಫೈನಲ್‌ವರೆಗೆ ಸತತ 10 ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
Advertisement
ಎಂಎಸ್ ಧೋನಿ (MS Dhoni) ನೇತೃತ್ವದಲ್ಲಿ 2011 ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯವನ್ನು ಸೋತಿತ್ತು. ಮೊದಲು ಬ್ಯಾಟ್ ಮಾಡಿದ್ದ ಭಾರತ 296 ರನ್‌ಗಳಿಗೆ ಆಲೌಟ್ ಆಗಿದ್ದರೆ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 300 ರನ್ ಹೊಡೆಯುವ ಮೂಲಕ ಜಯ ಗಳಿಸಿತ್ತು. ಇದನ್ನೂ ಓದಿ: World Cup Semifinal: 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಶಮಿ.!
Advertisement
Advertisement
2015 ಮತ್ತು 2019 ವಿಶ್ವಕಪ್ ಸೆಮಿಫೈನಲಿನಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಭಾರತ ಸೋತಿತ್ತು. ಈಗ ಭಾರತ ನಾಲ್ಕನೇಯ ಬಾರಿಗೆ ಫೈನಲ್ ಪ್ರವೇಶಿಸಿದೆ. 2003ರಲ್ಲಿ ಭಾರತ ರನ್ನರ್ ಅಪ್ ಆಗಿದ್ದರೆ 1983 ಮತ್ತು 2011ರಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು.
Advertisement
ಮುಂಬೈನಲ್ಲಿ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಹೊಡೆಯಿತು. ನ್ಯೂಜಿಲೆಂಡ್ 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲೌಟ್ ಆಯ್ತು. ಈ ಮೂಲಕ 2019ರ ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಸೋತಿದ್ದ ಭಾರತ ಸೇಡು ತೀರಿಸಿಕೊಂಡಿತು. ಇದನ್ನೂ ಓದಿ: 20 ವರ್ಷಗಳ ಹಿಂದಿನ ಸಚಿನ್ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ
ಇಂಗ್ಲೆಂಡಿನ ಮ್ಯಾಂಚೆಸ್ಟರ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಹೊಡೆದಿತ್ತು. ಭಾರತ 49.3 ಓವರ್‌ಗಳಲ್ಲಿ 221 ರನ್‌ಗಳಿಗೆ ಆಲೌಟ್ ಆಗಿತ್ತು.