ಇಂದೋರ್: ಮೂರನೇ ಏಕದಿನ ಪಂದ್ಯವನ್ನು 90 ರನ್‌ಗಳ ಭರ್ಜರಿ ಜಯ ಸಾಧಿಸಿದ ಭಾರತ (Team India) ನ್ಯೂಜಿಲೆಂಡ್ (New Zealand) ವಿರುದ್ಧ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಈ ಮೂಲಕ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಜಿಗಿದಿದೆ.
ರೋಹಿತ್ ಶರ್ಮಾ (Rohith Sharma) ಮತ್ತು ಶುಭಮನ್ ಗಿಲ್ (Shubman Gill ) ಅವರ ಶತಕದ ಆಟದಿಂದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿತ್ತು. ಭಾರೀ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ 41.2 ಓವರ್‌ಗಳಲ್ಲಿ 295 ರನ್‌ಗಳಿಗೆ ಆಲೌಟ್ ಆಯಿತು.
Advertisement
Advertisement
ನ್ಯೂಜಿಲೆಂಡ್ ಪರವಾಗಿ ಡೆವೊನ್ ಕಾನ್ವೇ 138 ರನ್(100 ಎಸೆತ, 12 ಬೌಂಡರಿ, 8 ಸಿಕ್ಸರ್), ಹೆನ್ರಿ ನಿಕೋಲ್ಸ್ 42 ರನ್(40 ಎಸೆತ, 3 ಬೌಂಡರಿ, 2 ಸಿಕ್ಸರ್) ಮೈಕೆಲ್ ಬ್ರೇಸ್ವೆಲ್ 26 ರನ್, ಮಿಚೆಲ್ ಸ್ಯಾಂಟ್ನರ್ 34 ರನ್ ಹೊಡೆದು ಸ್ವಲ್ಪ ಪ್ರತಿರೋಧ ತೋರಿಸಿದರು.
Advertisement
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ಭರ್ಜರಿ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 157 ಎಸೆತಗಳಲ್ಲಿ 212 ರನ್‌ಗಳ ಜೊತೆಯಾಟವಾಡಿದರು.
Advertisement
ರೋಹಿತ್ ಶರ್ಮಾ 101 ರನ್(85 ಎಸೆತ, 9 ಬೌಂಡರಿ, 6 ಸಿಕ್ಸರ್) ಗಿಲ್ 112 ರನ್ (78 ಎಸೆತ, 13 ಬೌಂಡರಿ, 5 ಸಿಕ್ಸರ್) ಹೊಡೆದು ಔಟಾದರು. ವಿರಾಟ್ ಕೊಹ್ಲಿ 36 ರನ್(27 ಎಸೆತ, 3 ಬೌಂಡರಿ, 1 ಸಿಕ್ಸರ್), ಹಾರ್ದಿಕ್ ಪಾಂಡ್ಯ 54 ರನ್(38 ಎಸೆತ, 3 ಬೌಂಡರಿಮ 3 ಸಿಕ್ಸರ್), ಶಾರ್ದೂಲ್ ಠಾಕೂರ್ 25 ರನ್(17 ಎಸೆತ, 3 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು.
Another comprehensive performance from #TeamIndia as they outclass New Zealand by 90 runs in Indore to complete a 3-0 whitewash. ????????
Scorecard ▶️ https://t.co/ojTz5RqWZf…#INDvNZ | @mastercardindia pic.twitter.com/7IQZ3J2xfI
— BCCI (@BCCI) January 24, 2023
34.3 ಓವರ್‌ಗೆ 3 ವಿಕೆಟ್ ಕಳೆದುಕೊಂಡು 268 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಭಾರತ ನಂತರ 117 ರನ್‌ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತ್ತು.
ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 114 ರೇಟಿಂಗ್‌ನೊಂದಿಗೆ ಮೊದಲ ಸ್ಥಾನ ಪಡೆದರೆ ಇಂಗ್ಲೆಂಡ್ 113 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. 112 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k