ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ (Assembly Bypoll Result) ಪ್ರಕಟವಾಗಿದ್ದು, ಇಂಡಿಯಾ ಒಕ್ಕೂಟ (INDIA Alliance) 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಆಡಳಿತ ಪಕ್ಷದ ಭಾಗವಾಗಿರುವ ಬಿಜೆಪಿ (BJP) ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಒಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ.
ಪಶ್ಚಿಮ ಬಂಗಾಳದ (West Bengal) 4, ಹಿಮಾಚಲ ಪ್ರದೇಶದ 3, ಉತ್ತರಾಖಂಡದ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ತಮಿಳುನಾಡಿನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಪೈಕಿ ಇಂಡಿಯಾ ಒಕ್ಕೂಟ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್, ಟಿಎಂಸಿ, ಆಮ್ ಆದ್ಮಿ ಪಕ್ಷ ಹಾಗೂ ದ್ರಾವೀಡ ಮುನ್ನೇತ್ರ ಕಳಗಂ (DMK) ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.
ಈ ಪೈಕಿ ಪಶ್ಚಿಮ ಬಂಗಾಳದ ನಾಲ್ಕು ಸ್ಥಾನಗಳು ಟಿಎಂಸಿ ಪಾಲಾಗಿವೆ. ಹಿಮಾಚಲ ಪ್ರದೇಶದ (Himachala Pradesh) ಮೂರು ಸ್ಥಾನಗಳ ಪೈಕಿ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಅಲ್ಲದೇ ಉತ್ತರಾಖಂಡದ ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದೆ. ಪಂಜಾಬ್ ಕ್ಷೇತ್ರ ಎಎಪಿ ಪಾಲಾದರೆ, ತಮಿಳುನಾಡಿನ ಒಂದು ಕ್ಷೇತ್ರ ಡಿಎಂಕೆ ಗೆದ್ದುಕೊಂಡಿದೆ. ಇದನ್ನೂ ಓದಿ: ಅನಂತ್ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!
ಬಿಜೆಪಿಗೆ 2 ಸ್ಥಾನ:
2024ರ ಲೋಕಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ವಿಧಾನಸಭಾ ಉಪಚುನಾವಣೆಯಲ್ಲಿ ಕೇವಲ 2 ಕ್ಷೇತ್ರಗಳನ್ನು ಮಾತ್ರ ಗೆದ್ದುಕೊಂಡಿದೆ. ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: 200 ಅಡಿ ಆಳದ ಕಮರಿಗೆ ಉರುಳಿದ ಬಸ್ – ಇಬ್ಬರು ಸಾವು, 25 ಮಂದಿಗೆ ಗಾಯ
ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ:
ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಿಎಂಕೆ ಪಕ್ಷದ ಅಣ್ಣಿಯೂರ್ ಶಿವ ಅವರು ಸುಮಾರು 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲಿ ಆಪ್‌ನ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳ ಅಂತರದಿಂದ ಗೆದ್ದಿದ್ದರೆ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಡೆಹ್ರಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್ ಭಾರತ್ ನಿಧಿ’ – ಏನಿದು ಯೋಜನೆ?