ಜೈಪುರ: INDIA ಒಕ್ಕೂಟವು ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ನಮ್ಮ ಪರಂಪರೆಯ ಮೇಲೆ ದಾಳಿ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗುಡುಗಿದ್ದಾರೆ.
ರಾಜಸ್ಥಾನದ ಡುಂಗರ್‌ಪುರದಲ್ಲಿ ಬಿಜೆಪಿ (BJP) ಪರಿವರ್ತನಾ ಯಾತ್ರೆ ಚಾಲನೆ ನೀಡಿ ಮಾತನಾಡಿದ ಶಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂಬ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿಯನ್ನ ಖಂಡಿಸಿದ್ದಾರೆ.
Advertisement
Advertisement
ಇಂತಹ ಹೇಳಿಕೆಗಳಿಂದ INDIA ಹಿಂದೂ ಧರ್ಮವನ್ನ ದ್ವೇಷಿಸುತ್ತದೆ ಹಾಗೂ ನಮ್ಮ ಪರಂಪರೆಯ ಮೇಲೆ ದಾಳಿ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ. ಅಲ್ಲದೆ, ಉದಯನಿಧಿ ಅವರ ಈ ಹೇಳಿಕೆಯು ವೋಟ್ ಬ್ಯಾಂಕ್ ರಾಜಕೀಯದ ಭಾಗವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ
Advertisement
ಐಎನ್‌ಡಿಐಎ ಒಕ್ಕೂಟ ಈ ದೇಶದ ಪರಂಪರೆ ಹಾಗೂ ಸನಾತನ ಧರ್ಮವನ್ನ ಅವಮಾನಿತ್ತಿದೆ. ಕಾಂಗ್ರೆಸ್ ಮತ್ತು ಡಿಎಂಕೆಯ (DMK) ಉನ್ನತ ನಾಯಕರು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಸನಾತನ ಧರ್ಮವನ್ನೇ ಮುಗಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆಯೂ ರಾಹುಲ್ ಗಾಂಧಿ ಅವರು, ಲಷ್ಕರ್-ಎ-ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದು ಹೇಳಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಸನಾತನ ಧರ್ಮವು ಜನರ ಹೃದಯವನ್ನ ಆಳುತ್ತಿದೆ. ಮೋದಿ ಗೆದ್ದರೆ ಸನಾತನ ಆಡಳಿತವೇ ಬರುತ್ತದೆ, ಸಂವಿಧಾನದ ಹಾದಿಯಲ್ಲೇ ಭಾರತ ಸಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಸ್ಥಾನವಿಲ್ಲ: ಮೋದಿ
ಇದೇ ವೇಳೆ ರಾಜಸ್ಥಾನದಲ್ಲಿ ಪತಿಯೇ ಪತ್ನಿಯನ್ನ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣ ಉಲ್ಲೇಖಿಸಿದ ಶಾ, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವು ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಮಹಿಳೆಯರನ್ನ ರಕ್ಷಿಸುವಲ್ಲಿ ವಿಫಲವಾಗಿದೆ, ರಾಜ್ಯದಲ್ಲಿ ಪ್ರತಿದಿನ 19 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಕಿಡಿ ಕಾರಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.
Web Stories