ಶ್ರೀನಗರ: ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಐಎನ್‌ಡಿಐಎ ಒಕ್ಕೂಟ (INDIA Bloc) ಜಮ್ಮು ಮತ್ತು ಕಾಶ್ಮೀರದಲ್ಲಿ 5 ರ ಪೈಕಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಡಿಎಗೆ (NDA) 1 ಸ್ಥಾನ ಸಿಕ್ಕಿದೆ ಎಂದು ಟ್ರೆಂಡ್‌ಗಳು ಹೇಳುತ್ತಿವೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಫಲಿತಾಂಶ ನೋಡಲು ಪ್ರಜ್ವಲ್ ರೇವಣ್ಣಗೆ ಅವಕಾಶ
Advertisement
Advertisement
ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪೈಕಿ ಒಮರ್ ಅಬ್ದುಲ್ಲಾ ಮುನ್ನಡೆಯಲ್ಲಿದ್ದಾರೆ. ಆದರೆ ಮೆಹಬೂಬಾ ಮುಫ್ತಿ ಅವರು 60,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
Advertisement
ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ (NC) ಒಮರ್ ಅಬ್ದುಲ್ಲಾ ಅವರು ತಮ್ಮ ಪ್ರತಿಸ್ಪರ್ಧಿ ಜೆ & ಕೆ ಪೀಪಲ್ಸ್ ಕಾನ್ಫರೆನ್ಸ್ (JKPC) ನ ಸಜಾದ್ ಗನಿ ಲೋನ್ ಅವರಿಗಿಂತ ಮುಂದಿದ್ದಾರೆ.
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಶೀಘ್ರದಲ್ಲಿಯೇ ನಡೆಸುವುದಾಗಿ ಚುನಾವಣಾ ಆಯೋಗ ಸೋಮವಾರ ಹೇಳಿತ್ತು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನದ ಪ್ರಮಾಣದಿಂದ ಚುನಾವಣಾ ಆಯೋಗವು ಉತ್ಸುಕವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರ ಉತ್ಸುಕತೆ ತೋರಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: NDA vs I.N.D.I.A ನೆಕ್ ಟು ನೆಕ್ ಫೈಟ್ – ಎನ್‌ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ