– ಗಡಿಯಾಚೆಗಿನ ಭಯೋತ್ಪಾದನೆ ತಡೆಯಲು ಕಠಿಣ ಕ್ರಮವಹಿಸಿ: ಪಾಕ್‌ಗೆ ಕರೆ
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ (Pakistan) ಭಾರತ (India) ಕರೆ ನೀಡಿದೆ.
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ವಾಗ್ದಾಳಿ ನಡೆಸಿದೆ. ಭಯೋತ್ಪಾದನೆಯನ್ನು ಉತ್ತೇಜಿಸುವವರು ಯಾರು ಎಂಬುದು ಇಡೀ ಜಗತ್ತಿಗೆ ತಿಳಿದಿದೆ ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನಮ್ಮ ಭಾಗ್ಯ: ಗೌತಮ್ ಅದಾನಿ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್, ಗಡಿಯಾಚೆಗಿನ ಭಯೋತ್ಪಾದನೆಗೆ ಕಾರಣರಾದ ರಾಷ್ಟ್ರಗಳಿವೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಟಾಂಗ್ ಕೊಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿವೆ ಎಂದು ಭಾರತೀಯ ಸೇನಾ ಮುಖ್ಯಸ್ಥರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ, ಭಾರತೀಯ ಸೇನೆಯನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದಿತ್ತು. ಅದಕ್ಕೆ ಜೈಸ್ವಾಲ್ ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆಯನ್ನು ಯಾರು ಉತ್ತೇಜಿಸುತ್ತಿದ್ದಾರೆಂದು ಇಡೀ ಜಗತ್ತಿಗೆ ತಿಳಿದಿದೆ. ಭಾರತದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ದಾಳಿಗಳು ನಡೆದಾಗ ಅದು ಎಲ್ಲಿಂದ ಬರುತ್ತಿದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹೀಗಿರುವಾಗ, ನಾವು ಏನನ್ನಾದರೂ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎನ್ನುವುದು ಸರಿಯಲ್ಲ. ಗಡಿಯಾಚೆಗಿನ ಭಯೋತ್ಪಾದನೆಗೆ ಕಾರಣರಾದ ಜನರಿದ್ದಾರೆ, ದೇಶಗಳಿವೆ ಎಂದು ಎಲ್ಲರಿಗೂ ತಿಳಿದಿದೆ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮಿಲಿಟರಿ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – 8 ಮಂದಿ ಸಾವು