ನವದೆಹಲಿ: ಕೆನಡಾದಲ್ಲಿ (Canada) ದ್ವೇಷ ಅಪರಾಧಗಳು, ಮತೀಯ ಹಿಂಸಾಚಾರಗಳು ಹಾಗೂ ಭಾರತ ವಿರೋಧಿ ಚಟುವಟಿಕೆಗಳು (Anti-Indian Activity) ಹೆಚ್ಚುತ್ತಿದ್ದು, ಇದರಿಂದ ಜಾಗರೂಕರಾಗಿರಿ ಎಂದು ಭಾರತ ಸರ್ಕಾರ ಶುಕ್ರವಾರ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು (Indian citizens) ಹಾಗೂ ವಿದ್ಯಾರ್ಥಿಗಳಿಗೆ (Students) ಎಚ್ಚರಿಕೆಯ ಸಂದೇಶವನ್ನು (Caution) ರವಾನಿಸಿದೆ.
ಕೆನಡಾದಲ್ಲಿ ದ್ವೇಷದ ಅಪರಾಧಗಳು, ಹಿಂಸಾಚಾರ ಹಾಗೂ ಭಾರತ ವಿರೋಧಿ ಚಟುವಟಿಕೆಗಳ ಘಟನೆಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಅಪರಾಧಗಳ ವಿರುದ್ಧ ತನಿಖೆ ಹಾಗೂ ಕ್ರಮ ಕೈಗೊಳ್ಳುವಂತೆ ನಾವು ಅಲ್ಲಿನ ಅಧಿಕಾರಿಗಳನ್ನು ಕೇಳಿಕೊಂಡಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಅಪರಾಧಿಗಳ ಮೇಲೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
Advertisement
Advisory for Indian Nationals and Students from India in Canadahttps://t.co/dOrqyY7FgN pic.twitter.com/M0TDfTgvrG
— Arindam Bagchi (@MEAIndia) September 23, 2022
Advertisement
ಕೆನಡಾದಲ್ಲಿ ಹೆಚ್ಚುತ್ತಿರುವ ಇಂತಹ ಘಟನೆಗಳಿಂದಾಗಿ ಅಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ಶಿಕ್ಷಣಕ್ಕಾಗಿ ತೆರಳಿರುವ ಭಾರತೀಯ ವಿದ್ಯಾರ್ಥಿಗಳು ಜಾಗರೂಕರಾಗಿರಿ ಎಂದು ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ಬಲವಂತದ ಮತಾಂತರ ತಡೆಗೆ ನಿರ್ದೇಶನ ಕೋರಿ ಅರ್ಜಿ – ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
Advertisement
ಒಟ್ಟಾವಾದಲ್ಲಿರುವ ಭಾರತೀಯ ಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಕಾನ್ಸುಲೇಟ್‌ಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಭಾರತ ಸರ್ಕಾರ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳನ್ನು ಕೇಳಿಕೊಂಡಿದೆ. ಇದರಿಂದ ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಅವಶ್ಯಕತೆ ಬಂದಾಗ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗುತ್ತದೆ ಎಂದು ತಿಳಿಸಲಾಗಿದೆ.
Advertisement
ಕೆನಡಾದಲ್ಲಿ ಸುಮಾರು 16 ಲಕ್ಷ ಭಾರತೀಯರು ನೆಲೆಸಿದ್ದಾರೆ. ಅಲ್ಲಿನ ಜನಸಂಖ್ಯೆಯ ಶೇ.3 ಕ್ಕಿಂತಲೂ ಹೆಚ್ಚು ಜನರು ಭಾರತೀಯರೇ ಇದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ
Live Tv
[brid partner=56869869 player=32851 video=960834 autoplay=true]