ನವದೆಹಲಿ: ನಿಗದಿತ ಟೈಮ್‌ಲೈನ್‌ನಂತೆ ಪೂರ್ವ ಲಡಾಖ್‌ನ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣಗೊಳಿಸಿವೆ. ದೀಪಾವಳಿಯ ಸಂದರ್ಭದಲ್ಲಿ ಉಭಯ ದೇಶಗಳ ಸೈನಿಕರು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳಲಿದ್ದಾರೆ.
ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಗಸ್ತು ತಿರುಗಲಾಗುವುದು ಎಂದು ಮೂಲಗಳು ತಿಳಿಸಿವೆ. ಪರಿಶೀಲನೆ ಪ್ರಕ್ರಿಯೆ ಮುಂದುವರಿದಿದ್ದು, ಗಸ್ತು ತಿರುಗುವ ವಿಧಾನಗಳನ್ನು ಸೇನಾ ಕಮಾಂಡರ್‌ಗಳು ನಿರ್ಧರಿಸುತ್ತಾರೆ ಎಂದು ಭಾರತೀಯ ಸೇನೆಯ ಮೂಲಗಳು ಬುಧವಾರ ತಿಳಿಸಿವೆ.
Advertisement
Advertisement
ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಪಿಎಂ ನರೇಂದ್ರ ಮೋದಿ ನಡುವೆ ಬ್ರಿಕ್ಸ್ ಶೃಂಗಸಭೆಯಲ್ಲಿ ಬಹಳ ಮಹತ್ವದ ಸಭೆ ನಡೆಯಿತು. ಉಭಯ ದೇಶಗಳ ನಡುವಿನ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಗೆ ಮಾರ್ಗಸೂಚಿಯಾಗಲಿದ್ದಾರೆ. ಭವಿಷ್ಯದಲ್ಲಿ ನಮ್ಮ ಸಂಬಂಧಗಳು ಸುಗಮವಾಗಿ ಮುಂದುವರಿಯುತ್ತವೆ ಎಂದು ರಾಯಭಾರಿ ತಿಳಿಸಿದ್ದಾರೆ.
Advertisement
ಎರಡು ನೆರೆಹೊರೆಯ ದೇಶಗಳಾಗಿ ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರುವುದು ಸಹಜ. ಅವುಗಳನ್ನು ಹೇಗೆ ನಿಭಾಯಿಸುವುದು ಮತ್ತು ಪರಿಹರಿಸುವುದು ಎಂಬುದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಈ ಭಿನ್ನಾಭಿಪ್ರಾಯಗಳನ್ನು ಹೇಗೆ ನಿಭಾಯಿಸಬೇಕು ಎಂಬುದಕ್ಕೆ ಉಭಯ ನಾಯಕರ ಭೇಟಿಯು ನಮಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
Advertisement
ಅ.21 ರಂದು, ಭಾರತವು ಡೆಪ್ಸಾಂಗ್ ಮತ್ತು ಡೆಮ್‌ಚೋಕ್‌ನ ಎರಡು ವಿವಾದಿತ ಪ್ರದೇಶಗಳಿಗೆ ಗಸ್ತು ಒಪ್ಪಂದ ಮಾಡಿಕೊಂಡಿದೆ ಎಂದು ಘೋಷಿಸಿತು. 2020 ರಲ್ಲಿ ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪ್ರಾರಂಭವಾಗುವ ಮೊದಲು ಇದ್ದ ಸ್ಥಾನಗಳಿಗೆ ಪಡೆಗಳು ಹಿಂತಿರುಗುತ್ತವೆ.