ಅಮೆರಿಕದ ವಿರುದ್ಧ ಬೆಂಗಳೂರಿನಲ್ಲಿ ಚೀನಾ ಕಾರ್ಯಕ್ರಮ – ಸಿದ್ದರಾಮಯ್ಯ, ಮಹಾದೇವಪ್ಪ ಮುಖ್ಯ ಅತಿಥಿ

Advertisements

ಬೆಂಗಳೂರು: ಭಾರತ – ಚೀನಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಮುಂದುವರಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಚೀನಾ ಪರವಾದ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

Advertisements

ಚೀನಾದ ಆಂತರಿಕ ವ್ಯವಹಾರಗಳಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡಿಸಿ ಭಾರತ – ಚೀನಾ ಫ್ರೆಂಡ್ ಶಿಪ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆಗೊಂಡಿದೆ.

ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಭಾನುವಾರ 10 ಗಂಟೆಗೆ “ಪೀಪಲ್ಸ್‌ ರಿಪಬ್ಲಿಕ್‌ ಆಫ್‌ ಚೀನಾದ ಆಂತರಿಕ ವ್ಯವಹಾರಗಳಲ್ಲಿ ಯುಎಸ್‌ ಸಾಮ್ರಾಜ್ಯಶಾಹಿಯ ಹಸ್ತಕ್ಷೇಪ ಖಂಡಿಸಿ ಮತ್ತು ಚೈನೀಸ್‌ ಛಾಯಚಿತ್ರ ಪ್ರದರ್ಶನ” ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisements

ಮಾಜಿ ಸಿಎಂ ಸಿದ್ದರಾಮಯ್ಯ, ಭಾರತದಲ್ಲಿರುವ ಚೀನಾ ರಾಯಭಾರಿ ಸನ್‌ ವೀಡಾಂಗ್‌, ಮಾಜಿ ಉಪ ಮುಖ್ಯಮಂತ್ರಿ ಎಚ್‌.ಸಿ ಮಹಾದೇವಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್‌ ಹನುಮಂತಯ್ಯ, ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯಾ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಕೆ. ಶ್ರೀನಿವಾಸ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹಾಕಲಾಗಿದೆ.

ಕಾಂಗ್ರೆಸ್‌ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: 54 ವರ್ಷ, ಮಾಡಿರೋದು 164 + ಕಳ್ಳತನ – ಭೂಪನಿಗಿದ್ದಾರೆ ಮೂವರು ಹೆಂಡ್ತಿರು, 7 ಮಕ್ಳು

Advertisements

ಸಿದ್ದರಾಮಯ್ಯ ಸ್ಪಷ್ಟನೆ:
ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಭಾಗವಹಿಸುತ್ತಿಲ್ಲ:
ಅನುಮತಿ ಇಲ್ಲದೇ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಲಾಗಿದೆ ಎಂದ ಹೆಚ್ ಸಿ ಮಹಾದೇವಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Live Tv

Advertisements
Exit mobile version