ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

Public TV
2 Min Read
shahid afridi tong

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Yasin Malik 2

ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

Share This Article
Leave a Comment

Leave a Reply

Your email address will not be published. Required fields are marked *