ಲಕ್ನೋ: ಟೀಂ ಇಂಡಿಯಾದ ಟಿ20 ಆಟಗಾರ ರಿಂಕು ಸಿಂಗ್ (Rinku Sigh) ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ (Priya Saroj) ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಶೀಘ್ರವೇ ಇಬ್ಬರ ಮದುವೆ (Marriage) ನಡೆಯಲಿದೆ ಎಂಬ ಸುದ್ದಿ ಈಗ ವೈರಲ್ ಆಗಿದೆ.
ಈ ಸುದ್ದಿಯ ಬಗ್ಗೆ ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಪ್ರತಿಕ್ರಿಯಿಸಿ, ರಿಂಕು ಅವರ ಕುಟುಂಬ ಮದುವೆ ಪ್ರಸ್ತಾಪ ಕಳುಹಿಸಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ತಿಳಿಸಿದರು.
Advertisement
ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಈ ಸುದ್ದಿಯ ಬಗ್ಗೆ ಇಲ್ಲಿಯವರೆಗೆ ರಿಂಕು ಸಿಂಗ್ ಆಗಲಿ ಸಂಸದೆ ಪ್ರಿಯಾ ಸರೋಜ್ ಖಚಿತಪಡಿಸಿಲ್ಲ.
Advertisement
Advertisement
ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ (Team India) ಸದಸ್ಯರಾಗಿದ್ದ ರಿಂಕು ಮುಂದಿನ ವಾರದಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ.
Advertisement
27 ವರ್ಷದ ರಿಂಕು ಆಗಸ್ಟ್ 2023 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ನಂತರ ಇಲ್ಲಿಯವರೆಗೆ ಎರಡು ಏಕದಿನ ಮತ್ತು 30 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಇಲ್ಲಿಯವರೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಟ್ಟು 562 ರನ್ ಗಳಿಸಿದ್ದಾರೆ.
ತಮ್ಮ ಫಿನಿಶಿಂಗ್ ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ರಿಂಕು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಪ್ರತಿನಿಧಿಸುತ್ತಾರೆ. ಇದನ್ನೂ ಓದಿ: ಎಸ್‌ಪಿ ಸಂಸದೆಯ ಜೊತೆ ಕ್ರಿಕೆಟಿಗ ರಿಂಕು ಸಿಂಗ್ ಎಂಗೇಜ್, ಶೀಘ್ರವೇ ಮದ್ವೆ
ಪ್ರಿಯಾ ಅವರು ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆ ಆಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಪಿ ಸರೋಜ್ ಅವರನ್ನು 35,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು.
ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಅವರು ಮೂರು ಬಾರಿ ಸಂಸದರಾಗಿದ್ದಾರೆ ಮತ್ತು ಹಾಲಿ ಕೆರಕಟ್ ಕ್ಷೇತ್ರದ ಶಾಸಕರಾಗಿದ್ದಾರೆ.