ಢಾಕಾ: ಏಷ್ಯಾಕಪ್ ಫೈನಲ್ (Asia Cup) ಪಂದ್ಯದಲ್ಲಿ ಭಾರತದ (India) ಮಹಿಳಾ ಆಟಗಾರ್ತಿಯರ ಸೂಪರ್ ಡೂಪರ್ ಆಟಕ್ಕೆ ಶ್ರೀಲಂಕಾ (Sri Lanka) ಮಂಕಾಗಿ ಸೋಲುಂಡಿದೆ. ಭಾರತ 8 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ 7ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.
Advertisement
ಶ್ರೀಲಂಕಾ ನೀಡಿದ 66 ರನ್‍ಗಳ ಅಲ್ಪ ಮೊತ್ತದ ಗುರಿಪಡೆದ ಭಾರತ ಈ ಮೊತ್ತವನ್ನು 8.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್ ಚಚ್ಚಿ ಗೆದ್ದು ಬೀಗಿದೆ. ಇತ್ತ 7ನೇ ಬಾರಿ ಭಾರತ ಪ್ರಶಸ್ತಿ ಗೆದ್ದು ಸಂಭ್ರಮಿಸಿದರೆ, ಶ್ರೀಲಂಕಾ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಅವಕಾಶ ಕಳೆದುಕೊಂಡಿತು. ಇದನ್ನೂ ಓದಿ: ಬಿಸಿಸಿಐಗೆ ಜಿಎಸ್‍ಟಿ ಬರೆ – 2023ರ ವಿಶ್ವಕಪ್‍ಗೂ ಮುನ್ನ 955 ಕೋಟಿ ರೂ. ನಷ್ಟದ ಭೀತಿ
Advertisement
Advertisement
ಲಂಕಾ ನೀಡಿದ ಅಲ್ಪಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಬ್ಯಾಟಿಂಗ್‍ನಲ್ಲಿ ನೆರವಾದರು. ಆರಂಭಿಕರಾಗಿ ಮಂಧಾನ ಜೊತೆ ಕಣಕ್ಕಿಳಿದ ಶಿಫಾಲಿ ವರ್ಮಾ 5 ರನ್‍ಗಳಿಗೆ ವಿಕೆಟ್ ಕೈಚೆಲ್ಲಿಕೊಂಡರು. ಆದರೆ ಇತ್ತ ಮಂಧಾನ ಬಿರುಸಿನ ಬ್ಯಾಟಿಂಗ್ ಮೂಲಕ ಲಂಕಾದ ಅಲ್ಪಮೊತ್ತವನ್ನು ಪುಟಿಗಟ್ಟಿದರು. ಅಂತಿಮವಾಗಿ ಮಂಧಾನ ಅಜೇಯ 51 ರನ್ 25 ಎಸೆತ, 6 ಬೌಂಡರಿ, 3 ಸಿಕ್ಸ್) ಚಚ್ಚಿ ಗೆಲುವಿನ ರೂವಾರಿಯಾದರು.
Advertisement
ಮಂಧಾನಗೆ ಉತ್ತಮ ಸಾಥ್ ನೀಡಿದ ಹರ್ಮನ್‍ಪ್ರೀತ್ ಕೌರ್ ಅಜೇಯ 11 ರನ್ (14 ಎಸೆತ, 1 ಬೌಂಡರಿ) ಸಿಡಿಸಿ 8.3 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 71 ರನ್ ಬಾರಿಸಿ ಗೆಲ್ಲಿಸಿದರು. ಇದನ್ನೂ ಓದಿ: ಸೂಪರ್ ಟೆನ್ ಲೀಗ್‍ನಲ್ಲಿ ಗೇಲ್ ಜೊತೆ ಬ್ಯಾಟ್ ಬೀಸಲಿದ್ದಾರೆ ಕಿಚ್ಚ ಸುದೀಪ್
ಈ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡ ಭಾರತದ ಬೌಲಿಂಗ್ ಪಡೆಯನ್ನು ಎದುರಿಸಲಾಗದೆ ನಾ ಮುಂದು ತಾ ಮುಂದು ಎಂದು ವಿಕೆಟ್ ಕಳೆದುಕೊಂಡು ಪರದಾಡಿತು. ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ಸ್ನೇಹ ರಾಣಾ ಸೇರಿಕೊಂಡು ಲಂಕಾವನ್ನು ಕಟ್ಟಿಹಾಕಿದರು. ಭಾರತದ ಬೌಲರ್‌ಗಳ ದಾಳಿ ಪತರುಗುಟ್ಟಿದ ಶ್ರೀಲಂಕಾ ಬ್ಯಾಟರ್‌ಗಳು 8 ಮಂದಿ ಒಂದಂಕಿಗೆ ವಿಕೆಟ್ ಒಪ್ಪಿಸಿ ಹೊರನಡೆದರು.
ಲಂಕಾ ಪರ ಇನೋಕಾ ರಣವೀರ 18 ರನ್ (22 ಎಸೆತ, 2 ಬೌಂಡರಿ) ಸಿಡಿಸಿದ್ದು ಹೆಚ್ಚಿನ ಗಳಿಕೆಯಾಗಿದೆ. ಅಂತಿಮವಾಗಿ 20 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 65 ರನ್ ಪೇರಿಸಲಷ್ಟೇ ಶಕ್ತವಾಯಿತು. ರೇಣುಕಾ ಸಿಂಗ್ 3 ವಿಕೆಟ್, ರಾಜೇಶ್ವರ ಗಾಯಕ್ವಾಡ್ ಮತ್ತು ಸ್ನೇಹ ರಾಣಾ ತಲಾ 2 ವಿಕೆಟ್ ಕಿತ್ತು ಮಿಂಚುಹರಿಸಿದರು.