ನವದೆಹಲಿ: ಭಾನುವಾರ ಬಾಂಗ್ಲಾದೇಶದ ವಿರುದ್ಧ ಟಿ-20 ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಭಾರತದ ಯುವ ವೇಗಿ ದೀಪಕ್ ಚಹರ್ ಐಸಿಸಿ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 88 ಸ್ಥಾನ ಏರಿಕೆಯಾಗಿ 42 ಸ್ಥಾನ ಪಡೆದಿದ್ದಾರೆ.
ಭಾನುವಾರ ಬಾಂಗ್ಲಾದೇಶದ ವಿರುದ್ಧ ನಡೆದ ಮೂರನೇ ಟಿ-20 ಪಂದ್ಯದಲ್ಲಿ ಭಾರತ 30 ರನ್‍ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ ಬೌಲರ್ ದೀಪಕ್ ಚಹರ್, ಈ ಪಂದ್ಯಕ್ಕೂ ಮುಂಚೆ ಐಸಿಸಿ ರ‍್ಯಾಂಕಿಂಗ್ ನಲ್ಲಿ 130 ಸ್ಥಾನದಲ್ಲಿದ್ದರು. ಆದರೆ ಈ ಪಂದ್ಯದಲ್ಲಿ 6 ವಿಕೆಟ್ ಪಡೆದು ಮಿಂಚಿದ ನಂತರ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ 88 ಸ್ಥಾನ ಜಿಗಿತಗೊಂಡು 42 ಸ್ಥಾನಕ್ಕೆ ಬಂದಿದ್ದಾರೆ.
Advertisement
Advertisement
ಸೋಮವಾರ ಐಸಿಸಿ ತನ್ನ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾನುವಾರ ಬಾಂಗ್ಲಾ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ ಭಾರತ ಗೆಲುವಿಗೆ ನೆರವಾದ ದೀಪಕ್ ಚಹರ್ 517 ಅಂಕಗಳೊಂದಿಗೆ 42 ಸ್ಥಾನದಲ್ಲಿ ಇದ್ದಾರೆ. ಇವರನ್ನು ಬಿಟ್ಟರೆ 519 ಅಂಕಗಳಿಂದ ಜಸ್ಪ್ರಿತ್ ಬುರ್ಮಾ ಅವರು 40 ಸ್ಥಾನದಲ್ಲಿ ಇದ್ದರೆ, 29 ಸ್ಥಾನದಲ್ಲಿ ಭುವನೇಶ್ವರ್ ಕುಮಾರ್, 27 ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್, 25 ಸ್ಥಾನದಲ್ಲಿ ಚಹಲ್, 18 ಸ್ಥಾನದಲ್ಲಿ ಕೃನಲ್ ಪಾಂಡ್ಯ, 14 ಸ್ಥಾನದಲ್ಲಿ ಕುಲದೀಪ್ ಯಾದವ್ ಅವರು ಇದ್ದಾರೆ.
Advertisement
ದೀಪಕ್ ಚಹರ್ ಅವರ ಅದ್ಭುತ ಬೌಲಿಂಗ್ ದಾಳಿಯ ಸಹಾಯದಿಂದ ಗೆದ್ದ ಭಾರತ ಐಸಿಸಿ ಟಿ-20 ರ‍್ಯಾಂಕಿಂಗ್ ನಲ್ಲಿ ಐದನೇ ಸ್ಥಾನದಲ್ಲಿ ಇದ್ದು, ಪಾಕಿಸ್ತಾನ ಮೊದಲ ಸ್ಥಾನದಲ್ಲಿ ಇದೆ. ಬಾಂಗ್ಲಾ ವಿರುದ್ಧ ಪಂದ್ಯದ ನಂತರ ರೋಹಿತ್ ಶರ್ಮಾ ಅವರು ಐಸಿಸಿ ಟಿ-20 ರ‍್ಯಾಂಕಿಂಗ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದು, ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ ಕೆ.ಎಲ್ ರಾಹುಲ್ ಒಂದು ಸ್ಥಾನ ಏರಿಕೆಯಾಗಿ ಎಂಟನೇ ಸ್ಥಾನದಲ್ಲಿ ಇದ್ದಾರೆ.
Advertisement
ದೀಪಕ್ ಲೋಕೇಂದ್ರಸಿಂಗ್ ಚಹರ್ ಅವರು ಬಲಗೈ ಮಧ್ಯಮ-ವೇಗದ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‍ಮನ್ ಆಗಿದ್ದು, ದೇಶೀಯ ಕ್ರಿಕೆಟ್‍ನಲ್ಲಿ ರಾಜಸ್ಥಾನ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಾರೆ. ಭಾನುವಾರದ ಪಂದ್ಯದಲ್ಲಿ ಹ್ಯಾಟ್ರಿಕ್ ಮೂಲಕ 7 ರನ್ ನೀಡಿ 6 ವಿಕೆಟ್ ಕಬಳಿಸದ ಅವರು, ಟ್ವೆಂಟಿ -20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಭಾರತದ ಪರ ಟಿ-20ಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು. ಈ ಪಂದ್ಯದಲ್ಲಿ ದೀಪಕ್ ಚಹರ್ ಎಸೆದದ್ದು 20 ಎಸೆತ (3.2 ಓವರ್), ನೀಡಿದ್ದು 7 ರನ್, ಯಾವುದೇ ಇತರೆ ರನ್ ಇಲ್ಲ. ಆದರೆ ಪಡೆದದ್ದು 6 ವಿಕೆಟ್. ಇದರಲ್ಲೂ 14 ಎಸೆತಗಳಿಗೆ ಯಾವುದೇ ರನ್ ಬಂದಿರಲಿಲ್ಲ.
ಈ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಟಿ20ಯಲ್ಲಿ ಚಹರ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೊದಲು ಶ್ರೀಲಂಕಾದ ಅಜಂತ ಮೆಂಡೀಸ್ 8 ರನ್ ನೀಡಿ 6 ವಿಕೆಟ್ ಪಡೆದಿದ್ದರು. ಈಗ 7 ರನ್ ನೀಡಿ 6 ವಿಕೆಟ್ ಪಡೆಯುವುದರೊಂದಿಗೆ ಈ ದಾಖಲೆಯನ್ನು ಚಹರ್ ಈಗ ಮುರಿದಿದ್ದಾರೆ.