ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13 ಸಾವಿರ ಕೋಟಿ ರೂಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಇಂಗ್ಲೆಂಡ್, ಭಾರತದ ಬಳಿ ದಾಖಲೆಗಳನ್ನು ಕೇಳಿತ್ತು. ಆದ್ರೆ ಕೇಂದ್ರ ಸರ್ಕಾರ ಈ ಸಂಬಂಧ ಇದೂವರೆಗೂ ಸ್ಪಂದಿಸಿಲ್ಲ ಎಂದು ಮೂಲಗಳಿಂದ ಮಾಹಿತಿ ದೊರಕಿದೆ.
ನೀರವ್ ಮೋದಿಗೆ ಸಂಬಂಧಿಸಿದಂತೆ ಬ್ರಿಟಿಷ್ ಪ್ರಾಧಿಕಾರ ಮಾಹಿತಿಗಾಗಿ ಹಲವು ಪ್ರಶ್ನೆಗಳನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಆದ್ರೆ ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅಲ್ಲದೆ ನೀರವ್ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಇಂಗ್ಲೆಂಡ್‍ನ ಕಾನೂನು ತಜ್ಞರ ತಂಡ ಭಾರತಕ್ಕೆ ಆಗಮಿಸಬೇಕೆ ಎಂದು ಕೇಳಿತ್ತು. ಇದಕ್ಕೂ ಭಾರತ ಸರಿಯಾಗಿ ಸ್ಪಂದಿಸಿಲ್ಲ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಈ ಹಿಂದೆ ಬಂದ ಮಾಹಿತಿ ಪ್ರಕಾರ, ನೀರವ್ ಮೋದಿ ಪಶ್ಚಿಮ ಲಂಡನ್‍ನಲ್ಲಿರುವ ಸೊಹೊ ಪ್ರದೇಶದಲ್ಲಿ ಹೊಸ ವಜ್ರದ ವ್ಯಾಪಾರ ಆರಂಭಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವಂಚಕ ನೀರವ್ ಮೋದಿಯನ್ನು ಬಂಧಿಸಲು ಭಾರತ ಸರ್ಕಾರ ಇಂಗ್ಲೆಂಡ್‍ಗೆ ಮನವಿ ಸಲ್ಲಿಸಿತ್ತು. ಈ ಕುರಿತು ಈಗ ಇಂಗ್ಲೆಂಡ್ ಆರೋಪಿ ನೀರವ್ ಮೋದಿ ವಿರುದ್ಧ ಇರುವ ದಾಖಲೆಗಳನ್ನು ನೀಡಿ, ನಂತರ ಅದನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಭಾರತಕ್ಕೆ ತಿಳಿಸಿತ್ತು. ಇದನ್ನೂ ಓದಿ:ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್
Exclusive: Telegraph journalists tracked down Nirav Modi, the billionaire diamond tycoon who is a suspect for the biggest banking fraud in India's historyhttps://t.co/PpsjGeFEsy pic.twitter.com/v3dN5NotzQ
— The Telegraph (@Telegraph) March 8, 2019
ವಿದೇಶದಲ್ಲಿ ಅಪರಾಧಿಗಳನ್ನು ಹಿಡಿಯಲು ಕಾನೂನು ನೆರವು ಬೇಗನೆ ಸಿಗುವುದಿಲ್ಲ, ಕೊಂಚ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಕಾನೂನು ನೆರವು ಒಪ್ಪಂದದ ಪ್ರಕಾರ ಭಾರತದ ಗೃಹ ಸಚಿವಾಲಯ ನೇರವಾಗಿ ಲಂಡನ್‍ನ ಭಾರತೀಯ ಹೈಕಮಿಷನ್‍ಗೆ ಸಮನ್ಸ್ ಅಥವಾ ವಾರೆಂಟ್‍ಗಳನ್ನು ರವಾನಿಸಬಹುದು. ಬಳಿಕ ಅದನ್ನು ಲಂಡನ್‍ನ ಭಾರತೀಯ ಹೈಕಮಿಷನ್ ಅಲ್ಲಿನ ಕೇಂದ್ರ ಪ್ರಾಧಿಕಾರಕ್ಕೆ ವರ್ಗಾಯಿಸುತ್ತದೆ. ಈ ಪ್ರಕರಣದಲ್ಲಿ, ನೀರವ್ ಮೋದಿ ವಂಚನೆ ಮಾಡಿರುವ ಬಗ್ಗೆ ದಾಖಲೆ ನೀಡಿದರೆ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬ್ರಿಟನ್‍ನ ಕೇಂದ್ರೀಯ ಅಧಿಕಾರವು ತಿಳಿಸಿದೆ.
ಏನಿದು ಪ್ರಕರಣ?:
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪರಾರಿಯಾಗಿದ್ದಾರೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv