InternationalLatestMain Post

ತೈಲ ಖರೀದಿಸಲು ಶ್ರೀಲಂಕಾಗೆ 3 ಸಾವಿರ ಕೋಟಿ ಸಾಲ ನೀಡಿದ ಭಾರತ

Advertisements

ಕೊಲಂಬೊ: ಶ್ರೀಲಂಕಾದಲ್ಲಿ ತುರ್ತು ತೈಲ ಖರೀದಿಗೆ ಭಾರತ ಬುಧವಾರ 500 ಮಿಲಿಯನ್ ಡಾಲರ್(ಸುಮಾರು 3 ಸಾವಿರ ಕೋಟಿ ರೂ.) ಸಾಲ ನೀಡಿದೆ. ಈ ಮೂಲಕ ಶ್ರೀಲಂಕಾಗೆ ತಾತ್ಕಾಲಿಕ ಆರ್ಥಿಕ ಪರಿಹಾರ ಲಭಿಸಿದೆ.

ಶ್ರೀಲಂಕಾದಲ್ಲಿ ಸದ್ಯ ಆರ್ಥಿಕ ಕುಸಿತ ಕಂಡುಬಂದಿದ್ದು, ಇಂಧನದ ಕೊರತೆ ನಿಭಾಯಿಸಲು ಭಾರತ ಸಹಾಯ ಮಾಡುತ್ತಿದೆ.

ಶ್ರೀಲಂಕಾದಲ್ಲಿ ಬೃಹತ್ ಕಲ್ಲಿದ್ದಲು ವಿದ್ಯುತ್ ಸ್ಥಾವರಗಳಲ್ಲಿ ಸ್ಥಗಿತ ಹಾಗೂ ವಿದ್ಯುತ್ ಕಡಿತಗಳು ಹೆಚ್ಚಾಗಿವೆ. ಇದರಿಂದ ಅಲ್ಲಿನ ಜನರು ಅಡುಗೆ ಅನಿಲ ಹಾಗೂ ಸೀಮೆ ಎಣ್ಣೆ ಖರೀದಿಗೆ ಮುಂದಾಗುತ್ತಿದ್ದಾರೆ. ಹೀಗಾಗಿ ದೇಶ ತೈಲದ ಕೊರತೆ ಎದುರಿಸುತ್ತಿದೆ. ಇದನ್ನೂ ಓದಿ: ನಕಲಿ ಸಮಾಜವಾದ: ಅಖಿಲೇಶ್‌ ಯಾದವ್‌ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ

ಜನವರಿ 15ರಂದು ನಡೆದ ವರ್ಚುವಲ್ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಾಗೂ ಶ್ರೀಲಾಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ನಡುವೆ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಭಾರತ ಸಾಲ ನೀಡಲು ನಿರ್ಣಯಿಸಿದೆ ಎಂದು ಬುಧವಾರದ ಅಧಿಕೃತ ಮಾಹಿತಿಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಅಫ್ಘಾನಿಸ್ತಾನ ವಿಚಾರದಲ್ಲಿ ರಷ್ಯಾ,ಭಾರತದ ನಿಲುವು ಒಂದೇ: ವರ್ಶಿನಿನ್

ಪೆಟ್ರೋಲಿಯಂ ಉತ್ಪನ್ನ ಖರೀದಿಗೆ ಭಾರತ ಶ್ರೀಲಂಕಾಗೆ 500 ಮಿಲಿಯನ್ ಡಾಲರ್ ನೀಡುತ್ತಿದೆ. ಅಕ್ಕಿ, ವಾಹನಗಳ ಬಿಡಿ ಭಾಗಗಳು ಹಾಗೂ ಸಿಮೆಂಟ್‌ನ ಕೊರತೆ ಕೂಡಾ ಶ್ರೀಲಂಕಾದಲ್ಲಿ ಉಂಟಾಗಿದೆ. ದ್ವೀಪ ರಾಷ್ಟ್ರದಲ್ಲಿ ವಿದೇಶಿ ವಿನಿಮಯದಿಂದ ಲಾಭಗಳಿಸುವ ವಲಯವೆಂದರೆ ಪ್ರವಾಸೋದ್ಯಮ. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಶ್ರೀಲಂಕಾದ ಪ್ರವಾಸೋದ್ಯಮದಲ್ಲಿ ಕುಸಿತ ಉಂಟಾಗಿದೆ. ಹೀಗಾಗಿ ದೇಶ ಆರ್ಥಿಕ ಹಿನ್ನೆಡೆ ಅನುಭವಿಸುತ್ತಿದೆ ಎಂದು ತಿಳಿಸಿದೆ.

Leave a Reply

Your email address will not be published.

Back to top button