ನವದೆಹಲಿ: ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಚಿನ್ನದ ಮೇಲಿನ ಆಮದು ಸುಂಕ ಶೇ.15 ರಷ್ಟು ಹೆಚ್ಚಾಗಿದೆ.
ಈ ಮೊದಲು ಶೇ.7.5ರಷ್ಟು ಆಮದು ಸುಂಕ ವಿಧಿಸಲಾಗುತ್ತಿತ್ತು. ಆದರೆ ಈಗ ಶೇ.12.5 ಕ್ಕೆ ಏರಿಕೆ ಮಾಡಲಾಗಿದೆ. ಜೂನ್ 30 ರಿಂದಲೇ ಈ ದರ ಜಾರಿಯಾಗಲಿದೆ.
Advertisement
ದಿಢೀರ್ ಆಗಿ ಚಿನ್ನದ ಆಮದು ಹೆಚ್ಚಾಗುತ್ತಿದೆ. ಮೇ ತಿಂಗಳಿನಲ್ಲಿ ಒಟ್ಟು 107 ಟನ್‌ಗೆ ಆಮದಾಗಿದೆ. ಜೂನ್ ತಿಂಗಳಿನಲ್ಲೂ ಆಮದು ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ
Advertisement
Advertisement
ಕೋವಿಡ್ ಬಳಿಕ ಭಾರತದಲ್ಲಿ ಚಿನ್ನದ ಆಮದು ಹೆಚ್ಚಾಗಿದೆ. ಕಳೆದ 10 ವರ್ಷಕ್ಕೆ ಹೋಲಿಸಿದರೆ 2021ರಲ್ಲಿ ಭಾರತ ಅತಿ ಹೆಚ್ಚು ಪ್ರಮಾಣದಲ್ಲಿ ಚಿನ್ನವನ್ನು ಆಮದು ಮಾಡಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ಹೇಳಿದೆ.
Advertisement
ಚೀನಾ ಬಿಟ್ಟರೆ ವಿಶ್ವದಲ್ಲೇ ಅತಿ ಹೆಚ್ಚು ಚಿನ್ನವನ್ನು ಆಮದು ಮಾಡುತ್ತಿರುವ ಎರಡನೇ ದೇಶ ಭಾರತ. ಆಮದು ಸುಂಕ ಹೆಚ್ಚಾದ ಹಿನ್ನೆಲೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಕನಿಷ್ಠ 2 ಸಾವಿರ ರೂ. ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.